• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯಪಾಲರಿಗೆ ಮನವಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು :ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ADVERTISEMENT

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು.

ಆದರೆ ಅವರು ಕಲ್ಲು ಹೊಡೆಯಿರಿ, ಟಯರ್‌ ಸುಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿದರು.ಬಿಜೆಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ನಾಯಕರು, ತಮ್ಮವರು ಪ್ರತಿಭಟನೆ ಮಾಡುತ್ತಾರೆ, ನೀವು ಸಹಕಾರ ನೀಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಕೈ ಕಟ್ಟಿ ಹಾಕಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ವತಃ ಲೂಟಿಕೋರರಾಗಿದ್ದು, ಅವರು ಅಧಿಕಾರದಿಂದ ಕೆಳಕ್ಕಿಳಿಯಬೇಕೆಂದು ಜನರು ಹೇಳುತ್ತಿದ್ದಾರೆ. ಮುಖ್ಯಮಂತ್ರಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದಿದ್ದರೂ ಅವರು ಶಾಸಕಾಂಗ ಪಕ್ಷದ ಸಭೆ ಕರೆದು ಶಾಸಕಾಂಗ ಪಕ್ಷದ ಬೆಂಬಲವನ್ನು ತೋರಿಸುತ್ತಿದ್ದಾರೆ. ಇದರಿಂದ ಏನು ಪ್ರಯೋಜನ ಎಂದು ಅವರು ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಮುಡಾ ಹಗರಣ ಕುರಿತು ಬಿಜೆಪಿ ಚರ್ಚಿಸಲು ಮುಂದಾದಾಗ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ. ಅಲ್ಲಿ 224 ಶಾಸಕರು, ಮಾಧ್ಯಮಗಳು, ಅಧಿಕಾರಿಗಳಿದ್ದರೂ, ಉತ್ತರ ನೀಡಲಿಲ್ಲ. ವಿರೋಧ ಪಕ್ಷವಾಗಿ ಕರ್ತವ್ಯದಂತೆ ಬಿಜೆಪಿ ಪಾದಯಾತ್ರೆ ಮಾಡಿದೆ. ಆದರೆ ಸರ್ಕಾರದ ಅಧಿಕಾರ ಬಳಸಿಕೊಂಡು ಕಾಂಗ್ರೆಸ್‌ ಸಮಾವೇಶ ಮಾಡಿದೆ. ಇದನ್ನು ಸರ್ಕಾರ ಎನ್ನುತ್ತಾರೆಯೇ? ಎಂದು ಅಶೋಕ ಪ್ರಶ್ನಿಸಿದರು.

ಬಿ.ಎಸ್‌.ಯಡಿಯೂರಪ್ಪ, ಎಲ್‌.ಕೆ.ಅಡ್ವಾಣಿ, ರಾಮಕೃಷ್ಣ ಹೆಗಡೆ ಅವರ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಸಚಿವ ಬಿ.ನಾಗೇಂದ್ರ ಅವರ ತಪ್ಪು ಇಲ್ಲವಾದರೆ ರಾಜೀನಾಮೆ ಕೊಟ್ಟಿದ್ದು ಏಕೆ? ದಲಿತರಾದರೆ ರಾಜೀನಾಮೆ ಕೊಡಬೇಕು. ಆದರೆ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ಕೊಡಬಾರದು ಎಂದರೆ ಹೇಗೆ? 5 ಲಕ್ಷ ರೂ.ಗೆ ಜಮೀನು ಪಡೆದು 62 ಕೋಟಿ ರೂ. ಕೇಳುವ ಯೋಜನೆ ರಾಜ್ಯದಲ್ಲಿದ್ದರೆ ಎಲ್ಲರಿಗೂ ತಿಳಿಸಲಿ. ಇಂತಹ ಲೂಟಿಕೋರರಿಗೆ ಶಿಕ್ಷೆಯಾಗಬೇಕು ಎಂದರು.

Tags: B Y VijayendraBJPBSYDyurappamuda scam cm siddaramaiahOpposition BJP leader R Ashok
Previous Post

ನನ್ನ ರಾಜಕೀಯವಾಗಿ ಮುಗಿಸಿದ್ರೆ ಕಾಂಗ್ರೆಸ್ ಮುಗಿಸಿದ್ದಂಗೆ ಅಂತಾ ಟಾರ್ಗೆಟ್..!

Next Post

ತಮ್ಮದೇ ಸ್ಟೈಲ್ ಫೋಟೋ ನೋಡಿ ಸಿದ್ದು ಫುಲ್ ನಗು..!

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post

ತಮ್ಮದೇ ಸ್ಟೈಲ್ ಫೋಟೋ ನೋಡಿ ಸಿದ್ದು ಫುಲ್ ನಗು..!

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!