ಬೆಂಗಳೂರು: ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ಅವಕಾಶ ಕಲ್ಪಿಸಿದೆ.
ಕೊರೋನಾ ಸಂದರ್ಭದಲ್ಲಿ ಎಲ್ಲಾ ವರ್ಗದವರಿಗೂ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಅಧಿಸೂಚನೆಗಳಿಗೆ ಸಂಬಂಧಿಸಿದಂತೆ 486 ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಿ ಅಕ್ಟೋಬರ್ 30ರವರೆಗೆ ಅರ್ಜಿ ಸಲ್ಲಿಸಲು ಲೋಕಸೇವಾ ಆಯೋಗ ಅವಕಾಶ ಕಲ್ಪಿಸಿದೆ. ಅರ್ಹ ಅಭ್ಯರ್ಥಿಗಳು ಕೆಪಿಎಸ್ಸಿ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.