ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಅಂಚೆ ಇಲಾಖೆ ಸಿಹಿ ಸುದ್ದಿ ನೀಡಿದೆ, ಅಂಚೆ ಇಲಾಖೆ ಮತ್ತೊಮ್ಮೆ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ರಾಜ್ಯಗಳ ಅಂಚೆ ವೃತ್ತಗಳ ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಸುಮಾರು 12,828 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವವರು ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ ಎನ್ನಲಾಗ್ತಾ ಇದೆ.
ಇನ್ನು ಈ ನೇಮಕಾತಿಗಳಲ್ಲಿ ಕೂಡ ಕೆಲವೊಂದು ಮಾನದಂಡಗಳನ್ನ ಅಳವಡಿಸಲಾಗುತ್ತದೆ. ಅದರಲ್ಲೂ ಪ್ರಮುಖವಾಗಿ 10ನೇ ತರಗತಿಯಲ್ಲಿ ಪಡೆದ ಅಂಕಗಳೊಂದಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೀಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಿಪಿಎಂ ಅಂದ್ರೆ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಎಬಿಪಿಎಂ ಅಂದ್ರೆ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಶ್ರೇಣಿಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.

ಈ ವೃತ್ತಿಯಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮೇ 11 ರಿಂದ ಜೂನ್ 11 ರವರೆಗೆ https://indiapostgdsonline.gov.in/ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಸೂಕ್ತವಾದ ಮಾಹಿತಿಯನ್ನ ನೀಡುವುದು ಕಡ್ಡಾಯವಾಗಿದೆ. ಇನ್ನು ಅಂಚೆ ಇಲಾಖೆಯ ಅಧಿಸೂಚನೆಯ ಪ್ರಕಾರ ದೇಶಾದ್ಯಂತ ಸುಮಾರು 12,828 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು :- ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಮುಖವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇದರ ಜೊತೆಗೆ ಗಣಿತ, ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಯ ಬಗ್ಗೆ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ. ಇನ್ನು ಕರ್ನಾಟಕದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದರಿಂದ 10ನೇ ತರಗತಿಯವರೆಗೆ ಕನ್ನಡ ವಿಷಯವನ್ನ ಅಧ್ಯಯನ ಮಾಡಿರುವುದು ಕೂಡ ಕಡ್ಡಾಯವಾಗಿರುತ್ತೆ.ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನ ಹೊಂದಿರುವುದು ಕೂಡ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವವರಿಗೆ ವಯೋಮಿತಿ ಕೂಡ ಇದೆ :- ಜೂನ್ 11, 2023ಕ್ಕೆ ಅನ್ವಯವಾಗುವಂತೆ 18 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೀಗಾಗಿ ಎಲ್ಲಾ ಅಭ್ಯರ್ತಿಗಳಿಗೆ ನಿಗದಿತ ವಯೋಮಿತಿಗಳನ್ನ ಇಲ್ಲಿ ಹೇರಲಾಗಿದೆ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯನ್ನ ಹೇರಲಾಗಿದೆ.
ವೇತನ ಎಷ್ಟು? :- ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ತಿಂಗಳಿಗೆ 12,000 ರಿಂದ 29,380 ರೂಪಾಯಿ. ಇನ್ನು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 10,000 ದಿಂದ 24,470 ರೂಪಾಯಿವರೆಗೆ ಸಿಗಲಿದೆ. ಅರ್ಜಿಗೆ ವಿಧಿಸಿರುವ ಶುಲ್ಕ ಎಷ್ಟು? :- ಎಸ್ಸಿ, ಎಸ್ಟಿ, ಅಂಗವಿಕಲ ಮತ್ತು ಮಹಿಳೆಯರಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನ ಪಾವತಿಸುವುದು ಕಡ್ಡಾಯವಾಗಿದೆ.