ಬೆಂಗಳೂರು: ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 576 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಹಾಗೂ ವೇತನ ಶ್ರೇಣಿ
ವಾರ್ಡರ್ (ವೀಕ್ಷಕರು): 560 ಹುದ್ದೆಗಳು
ದ್ವಿತೀಯ ದರ್ಜೆ ಬೋಧಕರು (Instructor Grade-II): 16 ಹುದ್ದೆಗಳು
ಒಟ್ಟು ಹುದ್ದೆಗಳು: 576
ವೇತನ ಶ್ರೇಣಿ: ₹37,500 ರಿಂದ ₹76,100

ಶೈಕ್ಷಣಿಕ ವಿದ್ಯಾರ್ಹತೆ
ವಾರ್ಡರ್ ಹುದ್ದೆಗೆ: ಎಸ್‌ಎಸ್‌ಎಲ್‌ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ದ್ವಿತೀಯ ದರ್ಜೆ ಬೋಧಕರು ಹುದ್ದೆಗೆ: ಎಸ್‌ಎಸ್‌ಎಲ್‌ಸಿ ಜೊತೆಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಾರ್ಪೆಂಟ್ರಿ, ಟೈಲರಿಂಗ್, ಟೆಕ್ಸ್‌ಟೈಲ್, ವೀವಿಂಗ್ ಇತ್ಯಾದಿ) ಡಿಪ್ಲೊಮಾ ಅಥವಾ ಪ್ರಮಾಣಪತ್ರ (Certificate) ಹೊಂದಿರಬೇಕು.
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 19.09.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.10.2026
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 16.10.2026

ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಪೂರೈಸಿರಬೇಕು. (ಸರ್ಕಾರದ ಆದೇಶದಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಅನ್ವಯಿಸಲಾಗಿದೆ):
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: ಗರಿಷ್ಠ 31 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 / 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 33 ವರ್ಷ

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆ
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ: 21.11.2026 (ಮಧ್ಯಾಹ್ನ 3:00 ರಿಂದ 4:30 ರವರೆಗೆ)
ಪರೀಕ್ಷಾ ಮಾದರಿ: ಒಟ್ಟು 100 ಅಂಕಗಳಿಗೆ 100 ಬಹು ಆಯ್ಕೆ ಪ್ರಶ್ನೆಗಳಿರುತ್ತವೆ (ಅವಧಿ: 1 ಗಂಟೆ 30 ನಿಮಿಷಗಳು). ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ ಮತ್ತು ಮಾನಸಿಕ ಸಾಮರ್ಥ್ಯ ಕುರಿತ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಋಣಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತಗೊಳಿಸಲಾಗುತ್ತದೆ.
ದೈಹಿಕ ಪರೀಕ್ಷೆ: ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ (PST) ಮತ್ತು ಸಹಿಷ್ಣುತೆ (ET) ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಮತ್ತು ಮಾಹಿತಿ
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಪರೀಕ್ಷಾ ದಿನಾಂಕ, ಪ್ರವೇಶ ಪತ್ರ ಹಾಗೂ ಇತರ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ https://cetonline.karnataka.gov.in/kea/ ಅಥವಾ https://prisons.karnataka.gov.in/en ಗೆ ಭೇಟಿ ನೀಡಲು ಕೋರಲಾಗಿದೆ.







