ನಟ ಪವರ್‌ಸ್ಟಾರ್ ಡಾ || ಪುನೀತ್ ರಾಜ್‌ಕುಮಾರ್ ಅಭಿಮಾನಿ ಓರ್ವ ಅಪ್ಪು ಪುಣ್ಯಸ್ಮರಣೆಯ ದಿನದಂದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಆನಂದೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಿರಣ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಪ್ಪು ಅಪ್ಪಟ ಅಭಿಮಾನಿಯಾಗಿದ್ದ ಕಿರಣ್ ತಮ್ಮ ನೆಚ್ಚಿನ ನಟನ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದ ಮುಂದಾಳತ್ವ ವಹಿಸಿದ್ದರು ಮತ್ತು ಶುಕ್ರವಾರ ಬಿಡುಗಡೆಯಾದ ಗಂಧದಗುಡಿ ಚಿತ್ರವನ್ನ ಸ್ನೇಹಿತರ ಜತೆಗೂಡಿ ವೀಕ್ಷಿಸಿದ್ದರು ಎಂದು ತಿಳಿದು ಬಂದಿದೆ.
ಎಂದಿನಂತೆ ಗ್ರಾಮದಲ್ಲಿ ಆಯೋಜಿಸಿದ್ದ ಪುಣ್ಯಸ್ಮರಣೆ ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ತೆರಳಿದ್ದ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.













