• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪ್ಪು ಸಮಾಧಿ ಅದ್ಬುತ ಸ್ಮಾರಕ ಮಾಡಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in ಕರ್ನಾಟಕ, ರಾಜಕೀಯ
0
ಅಪ್ಪು ಸಮಾಧಿ ಅದ್ಬುತ ಸ್ಮಾರಕ ಮಾಡಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯನ್ನು ಅದ್ಬುತ‌ ಸ್ಮಾರಕ ಮಾಡಲಾಗುವುದು.  ಅಂಬರೀಶ್ ಸ್ಮಾರಕ  ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಬೆಂಗಳೂರಿನ ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ರಿಂಗ್ ರಸ್ತೆಗೆ ಡಾ. ಪುನೀತ್ ರಾಜಕುಮಾರ ರಸ್ತೆ ಎಂದು ನಾಮಕರಣ ಮಾಡಿ ನಂತರ  ಬಾನ ದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಒಂದು ಅಭಿವೃದ್ದಿ ಪರ ನಗರ, ಇದರ ಬ್ರಾಂಡ್ ನೇಮ್ ಉಳಿಸಬೇಕು. ಕೆಲವರು ಇದರ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ವಿಶ್ವ ಖ್ಯಾತಿ ಪಡೆದ ಆರ್ ಆಂಡ್ ಡಿ ಕೇಂದ್ರಗಳಿವೆ. ಪ್ರತಿ ದಿನ ಐದು ಸಾವಿರ ತಜ್ಞರು ಈ ನಗರಕ್ಕೆ ಬರುತ್ತಾರೆ. ಈ ನಗರದ ಅಭಿವೃದ್ದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ನಗರದ ಎಲ್ಲ ಕ್ಷೇತ್ರಗಳು ಅಭಿವೃದ್ಧಿ ಆಗಿವೆ. ಇದರ ಹೆಸರು ಕೆಡಿಸಲು ಕೆಲವರು ಪ್ರಯತ್ನ ನಡೆಸಿದ್ದಾರೆ ಎಂದರು.

ಅಶೋಕ್ ಅವರು ಬೆಂಗಳೂರಿನಲ್ಕಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಅಭಿವೃದ್ಧಿ ಕೆಲಸವನ್ನು ತಾವೇ ಮುಂದೆ ನಿಂತು ನೋಡುತ್ತಿರುವುದು ಸಂತಸದ ವಿಷಯ. ಅಶೋಕ ಅವರು ಜನ ಉಪಯೋಗಿ ಶಾಸಕರು. ಅವರಿಗೆ ಈ ಕ್ಷೇತ್ರದ ಜನರು ಸದಾಕಾಲ ಆಶೀರ್ವಾದ ಮಾಡಬೇಕು ಎಂದು ಹೇಳಿದರು.

ರೇಸ್ ಕೋರ್ಸ್‌ ರಸ್ತೆಗೆ ಅಂಬರೀಶ್ ಹೆಸರು

ನನ್ನ ಆತ್ಮೀಯ ಸ್ನೇಹಿತ ಅಂಬರೀಶ್ ಅವರ ಹೆಸರನ್ನು ರೇಸ್‌ ಕೋರ್ಸ್ ರಸ್ತೆಗೆ ಇಡಲು ತೀರ್ಮಾನಿಸಿದ್ದೇನೆ.  ಅವನ ಜೊತೆ ವಾರದಲ್ಲಿ ಏಳೂ ದಿನ ಜೊತೆಗಿರುತ್ತಿದ್ದೆವು. ಅವನು ಕೊಡುಗೈ ದಾನಿ. ಅವನ ಸ್ಮಾರಕ ಮಾಡುವ ಸೌಭಾಗ್ಯ ನನ್ನದು ಎಂದರು. 

ಅಂಬರೀಶ್ , ರಾಜಕುಮಾರ್, ವಿಷ್ಣುವರ್ಧನ, ಶಂಕರನಾಗ್ ಅಪ್ಪು ಇವರೆಲ್ಲ ನಮ್ಮನ್ನು ರಂಜಿಸಲು  ಬಂದಿದ್ದರು ಎನಿಸುತ್ತದೆ. ಜೊತೆಗೆ ನಮ್ಮೆಲ್ಲರಿಗೆ  ಪ್ರೀತಿ ಬಿಟ್ಟು ಹೊಗಿದ್ದಾರೆ‌ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್. ಅಶೋಕ್, ಸಂಸದ ತೇಜಸ್ವಿಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ಎಂ.ಕೃಷ್ಣಪ್ಪ, ನಟ ರಾಘವೇಂದ್ರ ರಾಜಕುಮಾರ್, ಅಭಿಷೇಕ್ ಅಂಬರೀಶ್ ಹಾಗೂ ಮತ್ತಿತರ ಗಣ್ಯರು ಹಾಜರಿದ್ದರು.

Tags: ಪುನೀತ್ ರಾಜಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿರೆಬೆಲ್ ಸ್ಟಾರ್ ಅಂಬರೀಶ್
Previous Post

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 1

Next Post

ಬ್ರಾಹ್ಮಣರ ಬಗ್ಗೆ ಹೇಳಿಕೆ ಲಿಂಗಾಯತ ಸಮುದಾಯಕ್ಕೆ ಸಂದೇಶನಾ..?

Related Posts

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”
Top Story

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

by ಪ್ರತಿಧ್ವನಿ
April 20, 2026
0

ಮೈಸೂರು : ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. https://youtu.be/0ZcJCY4d9vw?si=bWrzGlvTgZXkdf5k ನಗರದಲ್ಲಿಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ...

Read moreDetails
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
Next Post
ಬ್ರಾಹ್ಮಣರ ಬಗ್ಗೆ ಹೇಳಿಕೆ ಲಿಂಗಾಯತ ಸಮುದಾಯಕ್ಕೆ ಸಂದೇಶನಾ..?

ಬ್ರಾಹ್ಮಣರ ಬಗ್ಗೆ ಹೇಳಿಕೆ ಲಿಂಗಾಯತ ಸಮುದಾಯಕ್ಕೆ ಸಂದೇಶನಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada