ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೆಸರು – ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿದೆ.
ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಏಪ್ರಿಲ್ 4ಕ್ಕೆ ನಾಮಿನೇಷನ್ ಸಲ್ಲಿಕೆಗೆ ಸಿದ್ಧತೆ ನಡೆಸಿರೋದಾಗಿ ಹೇಳಿದ್ರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಮೈತ್ರಿಯಾಗಿದೆ.
ಮೋದಿ ಅವರು ದೇವೇಗೌಡರನ್ನು ತಂದೆ ಸಮನಾರಾಗಿ ನಡೆಸಿಕೊಳ್ಳುತ್ತಾರೆ. ಆದರೆ ರಾಜಕೀಯ ಬದುಕು ಕೊಟ್ಟ ಅದೇ ದೇವೇಗೌಡರನ್ನು ಸಿದ್ದರಾಮಯ್ಯ ಹೀಯ್ಯಾಳಿಸುತ್ತಾರೆ. ಇದು ಸಿದ್ದರಾಮಯ್ಯಗೂ ಮೋದಿ ಅವರಿಗೂ ಇರುವ ವ್ಯತ್ಯಾಸ. ಕಾಂಗ್ರೆಸ್ ಎಷ್ಟೇ ಶ್ರಮವಹಿಸಿದರೂ ಜೆಡಿಎಸ್ ಮುಗಿಸಲು ಆಗಲ್ಲ. ರಾಜ್ಯಕ್ಕೆ ಸುಭದ್ರ ಸರಕಾರದ ಅವಶ್ಯಕತೆ ಇದೆ. ದೇಶಕ್ಕೆ ನರೇಂದ್ರ ಮೋದಿ ಆಡಳಿತ ಅನಿವಾರ್ಯ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾದರೆ ಐತಿಹಾಸಿಕ ಗೆಲುವು ನಮ್ಮದಾಗಲಿದೆ ಎಂದರು .ಅಲ್ಲದೆ
ಡಿಸೆಂಬರ್ ಒಳಗಾಗಿ ರಾಜ್ಯ ಕಾಂಗ್ರೆಸ್ ಸರಕಾರ ಪತನ ಎಂದು ಭವಿಷ್ಯ ನುಡಿದ್ರು.ನಾನು ಜೋತ್ಯಿಷ್ಯಕಾರನಲ್ಲ. ಆದರೆ, ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳ ಒಳಗಾಗಿ ಕಾಂಗ್ರೆಸ್ ಸರಕಾರ ಪತನವಾಗುತ್ತದೆ. ಅದು ತಾನಾಗಿಯೇ ಬಿದ್ದುಹೋಗಲಿದೆ. ನಾನು ಮತ್ತು ವಿಜಯೇಂದ್ರ ಅದಕ್ಕಾಗಿ ಕಷ್ಟಪಡಬೇಕಿಲ್ಲ. ಅವರೇ ಅವರ ಸರಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು.
ಸುಮಲತಾ ನನಗೆ ಆಶೀರ್ವಾದ ಮಾಡ್ತಾರೆ.
ನಾನು ಮತ್ತು ಅಂಬರೀಶ್ ಸ್ನೇಹಿತರು. ಅದೂ ಎಲ್ಲರಿಗೂ ತಿಳಿದಿರುವ ವಿಚಾರವೇ. ಸುಮಲತಾ ಅವರು ನನಗೆ ಅಂಬರೀಶ್ ಅವರೊಂದಿಗೆ ಊಟ ಬಡಿಸಿದ್ದಾರೆ. ನಾವು ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ನಿರ್ಧಾರ ಮಾಡಿ ಘೋಷಣೆ ಮಾಡುತ್ತಾರೆ ಎಂದರಲ್ಲದೆ; ಮತ್ತೊಬ್ಬ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆಯೂ ಇದೇ ರೀತಿಯ ಚೇಷ್ಟೇ ಮಾಡುತ್ತಿದ್ದಾರೆ. ಅದೇನೂ ವರ್ಕೌಟ್ ಆಗಲ್ಲ. ಮಂಜುನಾಥ್ ಜನಸಾಮಾನ್ಯರ ಅಭ್ಯರ್ಥಿ. ಏನು ಕುತಂತ್ರ ಮಾಡಿದರು ಪ್ರಯೋಜನವಿಲ್ಲ. ಡಿ.ಕೆ.ಸುರೇಶ್ ಕೆಲಸ ಮಾಡಿದ್ದೀವಿ, ಕೂಲಿ ಕೇಳ್ತಿದ್ದೀವಿ ಅನ್ನೋ ವಿಚಾರ.
ನಾವೇನೂ ದರೋಡೆ ಮಾಡಿದ್ದೀವಾ? ರಾಮನಗರ ಜಿಲ್ಲೆಗೆ ನಾನು ಕಾಲಿಡುವ ಮುಂಚೆ ಯಾವ ಪರಿಸ್ಥಿತಿ ಇತ್ತು.
ನಾನು ಕಾಲಿಟ್ಟ ಬಳಿಕ ಯಾವ ಪರಿಸ್ಥಿತಿ ಇದೆ. ಯಾವ ರೀತಿ ಕಾರ್ಯಕ್ರಮ ಕೊಟ್ಟಿದ್ದೀವಿ. ನಾನು ಮತ್ತು ಯಡಿಯೂರಪ್ಪ ಇದ್ದ ವೇಳೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮಾಡಿದಿವಿ. ಇದಕ್ಕೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾಕ್ಷಿ ಇದ್ದಾರೆ ಎಂದು ಡಿಕೆ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .