ಲಿಂಗಾಯತ ಪಂಚಮಸಾಲಿ (Lingayat panchamasali) ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂಬ ಕೂಗು ಹೆಚ್ಚಾಗಿದ್ದು ರಾಜ್ಯದಲ್ಲಿ 2A ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
ಈ ಮಧ್ಯೆ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಧಾನಸಭೆ ವಿರೋಧಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಮುಸಲ್ಮಾನರಿಗೆ ಮುತ್ತು ಕೊಡ್ತಾರೆ, ನಮಗೆ ಮಾತ್ರ ಲಾಠಿ ಏಟು ಕೊಡ್ತಾರೆ ಅಂತ ಕಿಡಿಕಾರಿದ್ದಾರೆ.
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ ಅವರಿಗೆ ಮುಸ್ಲಿಮರು ಎಂದರೆ ಅಪಾರ ಪ್ರೀತಿ, ಹೀಗಾಗಿ ಎಲ್ಲರ ಮೀಸಲಾತಿ ಕಿತ್ತು ಅವರಿಗೆ ಕೊಡಲು ಹೊರಟಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.