
ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕಾದ ಸ್ಟೇಟ್ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ.ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೆ ಅಮೆರಿಕ ಕೂಡ ತನ್ನ ಪ್ರತಿಕ್ರಿಯೆ ನೀಡಿದೆ.ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಗ್ಗೆ ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕ ವಕ್ತಾರರು ಇಮೇಲ್ ಮಾಡಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಜರ್ಮನಿ ಹೇಳಿಕೆ ನೀಡಿದ ನಂತರ ಭಾರತದ ಜರ್ಮನಿ ರಾಯಭಾರಿಯನ್ನು ಕರೆಸಿಕೊಂಡಿದ್ದ ಕೆಂದ್ರ ಸರ್ಕಾರ ತನ್ನ ಆಂತರಿಕ ವಿಷಯಗಳಲ್ಲಿ ತಲೆ ಹಾಕಿರುವುದರ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿತ್ತು. ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರಾದ ಸೆಬಾಸ್ಟಿನ್ ಫಿಸ್‌ಚೇರ್ ಅವರು, ಕೇಜ್ರಿವಾಲ್‌ರಂತೆ ಯಾರೆ ಆರೋಪಗಳನ್ನು ಎದುರಿಸುತ್ತಿದ್ದರೂ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಸಬೇಕು ಎಂದು ಹೇಳಿದ್ದರು.ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕಾದ ಸ್ಟೇಟ್ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ.ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೆ ಅಮೆರಿಕ ಕೂಡ ತನ್ನ ಪ್ರತಿಕ್ರಿಯೆ ನೀಡಿದೆ.ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಗ್ಗೆ ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕ ವಕ್ತಾರರು ಇಮೇಲ್ ಮಾಡಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಜರ್ಮನಿ ಹೇಳಿಕೆ ನೀಡಿದ ನಂತರ ಭಾರತದ ಜರ್ಮನಿ ರಾಯಭಾರಿಯನ್ನು ಕರೆಸಿಕೊಂಡಿದ್ದ ಕೆಂದ್ರ ಸರ್ಕಾರ ತನ್ನ ಆಂತರಿಕ ವಿಷಯಗಳಲ್ಲಿ ತಲೆ ಹಾಕಿರುವುದರ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿತ್ತು.
ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರಾದ ಸೆಬಾಸ್ಟಿನ್ ಫಿಸ್‌ಚೇರ್ ಅವರು, ಕೇಜ್ರಿವಾಲ್‌ರಂತೆ ಯಾರೆ ಆರೋಪಗಳನ್ನು ಎದುರಿಸುತ್ತಿದ್ದರೂ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಸಬೇಕು ಎಂದು ಹೇಳಿದ್ದರು.





