• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ನೀಟ್‌ ಪರೀಕ್ಷೆಯ ರದ್ದು ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ ಸ್ಫೋಟಕ ಆರೋಪ..!

ಪ್ರತಿಧ್ವನಿ by ಪ್ರತಿಧ್ವನಿ
May 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Share on WhatsAppShare on FacebookShare on Telegram

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್* ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ADVERTISEMENT
ನೀಟ್‌ ಸಂತ್ರಸ್ತರ ಬೆನ್ನಿಗೆ ನಿಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ.. #pratidhvani

ಈ ಬಗ್ಗೆ ಮಾಧ್ಯಮಗಳೊಂದಿಗೆ  ಮಾತನಾಡಿ, ನೀಟ್‌ ಎನ್ನುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ನಲ್ಲಿ ಒಂದಲ್ಲ ಒಂದು ಗೊಂದಲಗಳು, ಅಕ್ರಮಗಳು ನಡೆಯುತ್ತಲೇ ಇವೆ. ಇದಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮತ್ತೊಮ್ಮೆ ಬಹುದೊಡ್ಡ ಅಚಾತುರ್ಯವಾಗಿದೆ. ಕೇಂದ್ರ ಸರ್ಕಾರವೇ ಇದರ ಸಂಪೂರ್ಣ ಹೊಣೆ ಹೊರಬೇಕಾಗಿದೆ. ತಪ್ಪಿತಸ್ಥರನ್ನು ಕಾನೂನಿನ ಕಟಕಟೆಗೆ ತಂದು ನಿಲ್ಲಿಸಬೇಕಾಗಿದೆ. ಇದು ಕೇಂದ್ರ ಸರ್ಕಾರ ಅಮರ್ಥತತೆಗೆ ಸಾಕ್ಷಿಯಾಗಿದೆ. ಇದರಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗ ಮತ್ತೊಮ್ಮೆ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾದಂತಾಗುತ್ತದೆ. ವಿದ್ಯಾರ್ಥಿಗಳು, ಕುಟುಂಬದವರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತದೆ. ಮಾನಸಿಕ ಒತ್ತಡವೂ ಹೆಚ್ಚಾಗಲಿದೆ. ಪ್ರತಿ ವರ್ಷ ಆಗುತ್ತಿರುವ ಪ್ರಮಾದವನ್ನು ಸರಿ ಮಾಡಲು ಕೇಂದ್ರ ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ ಇದು ನಿಜಕ್ಕೂ ಅಸಮರ್ಥ ಸರ್ಕಾರವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ ಎಂದೇ ಅರ್ಥ. ಕೇಂದ್ರ ಬಿಜೆಪಿ ಭ್ರಷ್ಟ ಸರ್ಕಾರವಾಗಿದೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಮಹತ್ವದ ಹೆಜ್ಜೆ, ಬೆಂಗಳೂರು ಉಪನಗರ ರೈಲು ಯೋಜನೆಗೆ 153 ಹೊಸ ಕೋಚ್‌ಗಳು!

ಪ್ರಧಾನಿ ದೊಡ್ಡ ದೊಡ್ಡ ಭಾಷಣ ಮಾಡುವದಲ್ಲ, ಪರಿಹಾರ ಕೊಡಿಸಲಿ..

ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಭಾಷಣ ಮಾಡುವುದಲ್ಲ. ಇಂಥ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರಕಿಸಿಕೊಡಬೇಕು. “ಪರೀಕ್ಷಾ ಪೇ ಚರ್ಚಾ” ಮಾಡುವವರು ಈ ಪರೀಕ್ಷೆಯಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಲಿ. ಕರ್ನಾಟಕದಲ್ಲಿ ನಾವು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿದಾಗ ಇಂಥ ಯಾವುದೇ ಪ್ರಮಾದ ನಡೆದಿಲ್ಲ. ನಮ್ಮ ಪರೀಕ್ಷಾ ಮಾದರಿಯು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಡಾ. ಶರಣಪ್ರಕಾಶ ಪಾಟೀಲ್‌ ಕೇಂದ್ರವನ್ನು ಟೀಕಿಸಿದ್ದಾರೆ.

HD Kumaraswamy on NEET Exam Cancelled: ರಾಜ್ಯದಲ್ಲಿ ಎಷ್ಟು ಸಲ ಪರೀಕ್ಷೆ ರದ್ದಾಗಿಲ್ಲ ಅಂತಾ HDK ಕ್ಲಾಸ್

ಕೇಂದ್ರ ಸರ್ಕಾರಕ್ಕೆ, ಪ್ರಧಾನಿಗೆ ಪರೀಕ್ಷೆ ನಡೆಸುವ ಗಂಧ ಗಾಳಿ ಗೊತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಷ ತಪ್ಪುಗಳ ಮೇಲೆ ತಪ್ಪು ಎಸಗುತ್ತಲೇ ಇದೆ. ಇಂಥವರಿಗೆ ಜನರು ತಕ್ಕ ಪಾಠ ಕಲಿಸಬೇಕಾಗಿದೆ. ವಿದ್ಯಾರ್ಥಿಗಳು ನೀಟ್‌ ಗಾಗಿ ಸಾಕಷ್ಟು ಪರಿಶ್ರಮ ಪಟ್ಟು ಮಾನಸಿಕ ಒತ್ತಡದಿಂದ ಮುಕ್ತರಾಗಿದ್ದರು. ಈಗ ಪರೀಕ್ಷೆ ರದ್ದು ಮಾಡಿದ್ದರಿಂದ ಅವರ ಮೇಲೆ ಒತ್ತಡ ಹೇರಿದಂತಾಗಿದೆ ಎಂದು ಹರಿಹಾಯ್ದಿದ್ದಾರೆ.

ಆದರೆ ವಿದ್ಯಾರ್ಥಿಗಳು ಈ ಜೀವನ ಕಷ್ಟಕಾಲದಲ್ಲಿ ಯಾವುದೇ ಆತಂಕಕ್ಕೆ ಒಳಗಾಗದೇ ಮುಂದಿನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧರಾಗಬೇಕಾಗಿದೆ. ಇದೇ ನನ್ನ ಆತ್ಮೀಯ ಸಲಹೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ಕಿವಿಮಾತು ಹೇಳಿದ್ದಾರೆ.

ಕೋಚಿಂಗ್‌ ಸೆಂಟರ್‌ಗಳ ದಂಧೆ..

ರಾಜಸ್ಥಾನ, ಹರಿಯಾಣದಲ್ಲಿರುವ ಕೋಚಿಂಗ್‌ ಸೆಂಟರ್‌ಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯನ್ನು ಮಾಡಿಸಿ ತಮ್ಮ ಇಮೇಜ್‌ ಹೆಚ್ಚಿಸಿಕೊಳ್ಳುತ್ತಿವೆ. ಕೇಂದ್ರ ಸರ್ಕಾರದವರು ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ. ಸಂಬಂಧಪಟ್ಟ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಅಕ್ರಮದಲ್ಲಿ ತೊಡಗುವ ಇಂಥ ಕೋಚಿಂಗ್‌ ಸೆಂಟರ್‌ಗಳ ಮೇಲೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಒತ್ತಾಯಿಸಿದ್ದಾರೆ.

Previous Post

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

Next Post

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

Related Posts

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!
Top Story

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

by ಪ್ರತಿಧ್ವನಿ
June 8, 2026
0

ಸೂರ್ಯನ ಮೇಲ್ಮೈಯಲ್ಲಿ ಸಂಭವಿಸಿರುವ ಪ್ರಬಲ ಸ್ಫೋಟದ ಪರಿಣಾಮವಾಗಿ ಭೂಮಿಯತ್ತ ಸೌರ ಕಣಗಳ ಪ್ರವಾಹ ವೇಗವಾಗಿ ಸಾಗುತ್ತಿದ್ದು, ಭೂಕಾಂತೀಯ ಬಿರುಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಅಮೆರಿಕದ ಬಾಹ್ಯಾಕಾಶ...

Read moreDetails
“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

June 8, 2026
“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

June 8, 2026
ಜೈಲಿನಲ್ಲಿ ನಟ ದರ್ಶನ್‌ ಆರೋಗ್ಯ ಕ್ಷೀಣವೇ? ವೈರಲ್ ಫೋಟೋ ನೋಡಿ ಅಭಿಮಾನಿಗಳ ಆತಂಕ

ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ; ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ

June 8, 2026
ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

June 8, 2026
Next Post
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada