ಬೆಂಗಳೂರು: ರಾಜ್ಯದ ಎರಡು ಪ್ರಮುಖ ಕ್ಷೇತ್ರಗಳಲ್ಲಿ ಕಳೆದ ತಿಂಗಳು ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ಯಾಮನೂರು ಅವರಿಗೆ ಮತದಾರರು ಬೆಂಬಲ ನೀಡಿದರೆ, ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ.
ಫಲಿತಾಂಶ ಹೊರಬಿದ್ದ ತಕ್ಷಣವೇ ಬಿಜೆಪಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದ್ದಾರೆ.
ಬಿಜೆಪಿ ಕರ್ನಾಟಕದ ಫೇಸ್‌ಬುಕ್ ಪೇಜ್‌ನಲ್ಲಿ ಹಾಕಲಾದ ಪೋಸ್ಟ್‌ಗಳಿಗೆ ಸಾವಿರಾರು ಕಮೆಂಟ್‌ಗಳು ಹರಿದುಬಂದಿದ್ದು, ಹಲವರು ನೇರವಾಗಿ ವಿಜಯೇಂದ್ರ ಅವರನ್ನು ಟಾರ್ಗೆಟ್ ಮಾಡಿದ್ದಾರೆ. “ಸೋಲಿನ ಸಂಪೂರ್ಣ ಹೊಣೆ ನಿಮ್ಮದು”, “ಸಂಘಟನೆ ಬಲಪಡಿಸುವಲ್ಲಿ ವಿಫಲ”, “ಅಡ್ಜಸ್ಟ್ಮೆಂಟ್ ರಾಜಕಾರಣದಿಂದ ಹಿನ್ನಡೆ” ಎಂಬ ಆರೋಪಗಳು ಕೇಳಿಬರುತ್ತಿವೆ.
ಇದರ ಜೊತೆಗೆ “ಗೋ ಬ್ಯಾಕ್ ವಿಜಯೇಂದ್ರ” ಎಂಬ ಅಭಿಯಾನವೂ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ. ಕೆಲವರು ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಪಕ್ಷ ನಿರಂತರ ಸೋಲು ಕಾಣುತ್ತಿದೆ ಎಂದು ಹೇಳಿ, ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ…






