ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್ ಮತ್ತು ಜಯ ದಂಪತಿ ಪುತ್ರ ದಿವಿನ್(28) ಗಂಭೀರವಾಗಿ ಗಾಯಗೊಂಡಿರುವ ಯೋಧ.
ಸೇನಾ ವೈದ್ಯರ ಜೊತೆ ಮಡಿಕೇರಿ ಶಾಸಕ ಮಂಥರ್ ಗೌಡ ಮಾತು. ತನ್ನ ಕ್ಷೇತ್ರದ ಸೈನಿಕನ ಆರೋಗ್ಯ ಸ್ಥಿತಿ ಬಗ್ಗೆ ದೂರವಾಣಿ ಮೂಲಕ ವೈದ್ಯರ ಜೊತೆ ಮಾಹಿತಿ ಪಡೆದ ಶಾಸಕ ಮಂಥರ್ ಗೌಡ.
ಯೋಧನಿಗೆ ಚಿಕಿತ್ಸೆ ನೀಡುತ್ತಿರುವ ಶಿವಮೊಗ್ಗ ಮೂಲದ ವೈದ್ಯಯೋಧನ ಗಂಭೀರ ಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ವೈದ್ಯರು.
ದಿವಿನ್ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಭಾರತೀಯ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ದಿವಿನ್ ತಾಯಿ ಜಯ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದಾರೆ. ಇನ್ನಷ್ಟೇ ದಿವಿನ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ.