ʼನನ್ನನ್ನೂ ಬಂಧಿಸಿʼ; ಕೋವಿಡ್‌ ಪೋಸ್ಟರ್ ಸಂಬಂಧಿತ ಬಂಧನಗಳ ವಿರುದ್ಧ ರಾಹುಲ್‌ ಗಾಂಧಿ ಸವಾಲು

‘ಮೋದೀಜೀ ನಮ್ಮ ಮಕ್ಕಳಿಗೆ ಕೊಡಬೇಕಾದ ಲಸಿಕೆಯನ್ನು ವಿದೇಶಕ್ಕೆ ಯಾಕೆ ಕಳುಹಿಸಿದಿರಿ?’ ಎಂಬ ಭಿತ್ತಿಚಿತ್ರಗಳನ್ನು ಅಂಟಿಸಿದ ಆರೋಪದ ಮೇಲೆ ಶನಿವಾರ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿ, 17 ಎಫ್‌ಐಆರ್‌ ದಾಖಲಿಸಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ಈ ಭಿತ್ತಿಚಿತ್ರ ಅಭಿಯಾನಕ್ಕೆ ಬೆಂಬಲ ಘೋಷಿಸಿದ್ದಾರೆ.

ಪೋಸ್ಟರ್‌ನಲ್ಲಿದ್ದ ಬರಹವಿರುವ ಚಿತ್ರವನ್ನು ಕಾಂಗ್ರೆಸ್‌ ನಾಯಕರು ಸೇರಿದಂತೆ, ಪಕ್ಷದ ಖಾತೆಗಳು ಪ್ರೋಫೈಲ್‌ ಚಿತ್ರವಾಗಿ ಬಳಸಿಕೊಂಡಿದೆ.

ಬಂಧನ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ನನ್ನನ್ನೂ ಅರೆಸ್ಟ್‌ ಮಾಡಿ ಎಂದು ಟ್ವಿಟರಿನಲ್ಲಿ ಹೇಳಿಕೊಂಡಿದ್ದಾರೆ. ಮೋದಿ ಅವರೇ, ನಮ್ಮ ಮಕ್ಕಳ ಲಸಿಕೆಯನ್ನು ಏಕೆ ವಿದೇಶಕ್ಕೆ ಕಳುಹಿಸಿದ್ದೀರಾ ಎಂದು ಪ್ರಶ್ನಿಸುವ ಫೋಸ್ಟರ್ ನಲ್ಲಿನ ಚಿತ್ರವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ ನನ್ನನ್ನೂ ಬಂಧಿಸಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್‌ ಸಮರ್ಥಿಸಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಟ್ವಟಿರ್‌ ಖಾತೆಯ ಪ್ರೊಫೈಲ್ ಫೋಟೋ ತೆಗೆದು ಹಾಕಿ, ಈ ವಿವಾದಿತ ಪೋಸ್ಟರ್‌ ಫೋಟೋ ಹಾಕಿಕೊಂಡಿದ್ದಾರೆ. ಈ ವಿವಾದಿತ ಪೋಸ್ಟರ್‌ನಲ್ಲಿ ಕೂಡಾ ‘ಮೋದೀಜೀ ನಮ್ಮ ಮಕ್ಕಳಿಗೆ ಕೊಡಬೇಕಾದ ಲಸಿಕೆಯನ್ನು ವಿದೇಶಕ್ಕೆ ಯಾಕೆ ಕಳುಹಿಸಿದಿರಿ?’ ಎಂದು ಪ್ರಶ್ನಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್‌ ಪಕ್ಷದ ಅಧಿಕೃತ ಫೇಸ್‌ಬುಕ್‌ ಖಾತೆಯ ಪ್ರೊಫೈಲ್‌ ಚಿತ್ರವೂ ಬದಲಾಗಿದ್ದು, ಕನ್ನಡದಲ್ಲಿ ಇದೇ ಪ್ರಶ್ನೆಯನ್ನು ಕೇಳಿರುವ ಚಿತ್ರವನ್ನು ಹಂಚಿಕೊಂಡು ಅಭಿಯಾನದ ಭಾಗವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೂ 22ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದೆ, ಹಾಗೂ 24 ಕ್ಕೂ ಅಧಿಕ ಮಂದಿಯ ಬಂಧನವಾಗಿದೆ ಎಂದು ಭಾನುವಾರದ ವರದಿಗಳು ಉಲ್ಲೇಖಿಸಿವೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...