ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದ ಗಲಭೆಕೋರರನ್ನು ಬಂಧಿಸುವ ಕಾರ್ಯಾಚರಣೆ ದಿನದಿಂದ ದಿನಕ್ಕೆ ಚುರುಕುಗೊಂಡಿದೆ. ಪ್ರಕರಣದ ಸಂಬಂಧಿ ಒಟ್ಟು 146 ಆರೋಪಿಗಳು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 146 ಆರೋಪಿಗಳನ್ನು ಬಂಧಿಸಲಾಗಿದೆ. 145 ಆರೋಪಿಗಳನ್ನು ಹುಬ್ಬಳ್ಳಿ, ಧಾರವಾಡ, ಬಳ್ಳಾರಿ ಮತ್ತು ಕಲಬುರಗಿ ಜೈಲುಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಒಬ್ಬ ಪ್ರಮುಖ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.