ಮಂಗಳೂರು ; ಇಲ್ಲಿಗೆ ಸಮೀಪದ ಉಪ್ಪಿನಂಗಡಿ ತಾಲ್ಲೂಕಿನ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ಭಾನುವಾರ ತಡ ರಾತ್ರಿ ಕೊಲೆಯಾಗಿದ್ದು ಪ್ರಕರಣದಕ್ಕೆ ಸಂಭಂಧಿಸಿದಂತೆ ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಈ 16 ವರ್ಷದ ಬಾಲ ಅರೋಪಿಯು ಹೇಮಾವತಿ ಅವರ ಮನೆಯಲ್ಲಿ ತಾರೀಖು 16 ರಂದು ರಾತ್ರಿ ತಂಗಿದ್ದ ಅವರ ಅಕ್ಕನ ಮಗನೇ ಆಗಿದ್ದು ಈತ ಹತ್ತನೇ ತರಗತಿಯ ವಿದ್ಯಾರ್ಥಿ ಆಗಿದ್ದಾನೆ. ಅಪ್ರಾಪ್ತ ಬಾಲಕನು ರಾತ್ರಿ ವೇಳೆ ಹೇಮಾವತಿ ಮಲಗಿದಲ್ಲಿಗೆ ಹೋಗಿ ತನ್ನ ಚಿಕ್ಕಮ್ಮ ಎನ್ನುವುದನ್ನೂ ಮರೆತು ಲೈಂಗಿಕ ಸುಖ ಬಯಸಿದ್ದಾನೆ. ಆದರೆ ಇದಕ್ಕೆ ಹೇಮಾವತಿ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಬೆಳಗಾದರೆ ಇವರು ತನ್ನ ದುಷ್ಟ ಕೃತ್ಯವನ್ನು ಎಲ್ಲರಿಗೂ ಹೇಳುತ್ತಾರೆ ಎಂಬ ಭಯದಿಂದ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಹೇಮಾವತಿ ಅವರ ಪತಿ ವಿಠಲ ಪೈ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದು, “ನನ್ನ ಪತ್ನಿ ಹೇಮಾವತಿ ಆಕೆಯ ತಾಯಿ ಮನೆಯಲ್ಲಿ ವಾಸ್ತವ್ಯ ಇದ್ದು, ಆಕೆ ಮಲಗಿದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ತನಗೆ ಮಾಹಿತಿ ಬಂದಿತ್ತು. ಆ ಬಳಿಕ ನಾನು ಪತ್ನಿಯ ಮನೆಯಾದ ಬಿಳಿಯೂರು ಗ್ರಾಮದ ದರ್ಖಾಸ್ತು ಎಂಬಲ್ಲಿಗೆ ಹೋಗಿ ನೋಡಿದಾಗ, ಪತ್ನಿಯ ಮೃತ ದೇಹದಲ್ಲಿ ಗಾಯದ ಗುರುತು ಇದ್ದು ಈ ಬಗ್ಗೆ ನನಗೆ ಸಂಶಯ ಬಂತು. ಜೂನ್ 16ರಂದು ರಾತ್ರಿ ಪತ್ನಿಯ ಅಕ್ಕನ ಮಗ ಅಜ್ಜಿಯ ಮನೆಗೆ ಬಂದಿದ್ದು, ರಾತ್ರಿ ಪತ್ನಿಯ ತಾಯಿ, ಪತ್ನಿಯ ಅಕ್ಕನ ಮಗ ಮತ್ತು ಪತ್ನಿ ಊಟ ಮಾಡಿ ಮಲಗಿದ್ದರು. ಆದರೆ ಬೆಳಗಾದಾಗ ಪತ್ನಿಯು ಶವವಾಗಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದರು.
ಈ ಕೃತ್ಯವು ಈ ಪ್ರದೇಶದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು ನೈಜ ಆರೋಪಿಯ ದುಷ್ಕೃತ್ಯದ ಕುರಿತು ಗ್ರಾಮಸ್ಥರು ಭಾರೀ ಆಶ್ಚರ್ಯ ಮತ್ತು ಕೋಪ ವ್ಯಪಕ್ತಪಡಿಸಿದ್ದಾರೆ. ರಾತ್ರಿ ಆರೋಪಿಯು ಮುಂದುವರೆದಾಗ ನಿರಾಕರಿಸಿದ್ದಕ್ಕೆ ತಲೆ ದೊಂಬನ್ನು ಮುಖದ ಮೇಲೆ ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೋಲೀಸರು ಹೇಳಿದ್ದಾರೆ.
ಮೃತ ಹೇಮಾವತಿ ಅವರ ಪತಿ ವಿಠಲ ಪೈ ಅವರ ದೂರಿನ ಮೇರೆಗೆ ಆರೋಪಿ ಬಾಲಕನನ್ನು ವಿಚಾರಣೆಗೆ ಒಳಪಡಿಸಿದ್ದು, ಆತನೇ ಕೊಲೆ ಮಾಡಿರುವುದು ಸಾಬೀತಾಗಿದೆ. ಘಟನೆ ನಡೆದು ಪೋಲೀಸರು ತನಿಖೆ ನಡೆಸುತಿದ್ದಾಗಲೂ ಬಾಲಕನು ಅಮಾಯಕನಂತೆ ವರ್ತಿಸಿ ಜತೆಯಲ್ಲಿಯೇ ಇದ್ದ ಎನ್ನಲಾಗಿದೆ. ಅಪ್ರಾಪ್ತ ಬಾಲಕನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕರಣದ ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಬಿ ಎಸ್ ರವಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ
ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ, ನವೆಂಬರ್ 21: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ...
Read moreDetails