ಮಂಗಳೂರು ಗುರುಪುರ ಕೈಕಂಬ ಬಸ್ ನಿಲ್ದಾಣದ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಜಗಳವಾಡುತ್ತಿದ್ದ ಇಬ್ಬರನ್ನು ಬಜೆ ಪೊಲೀಸರು ಮಂಗಳವಾರ (ಆಗಸ್ಟ್ 22) ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ನಿವಾಸಿ ಶಿವಪ್ರಸಾದ್ (39) ಮತ್ತು ಶಕ್ತಿನಗರ ನಿವಾಸಿ ಷಡ್ರಕ್ ಇಮ್ಯಾನುವಲ್ ಯಾನೆ ಮನು (39) ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಮಂಗಳೂರು ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ವೈಯಕ್ತಿಕ ವಿಚಾರವಾಗಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹೊಡೆದಾಡಿಕೊಂಡಿದ್ದಾರೆ. ತಕ್ಷಣ ಸ್ಥಳೀಯರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.