ರಾಮನಗರ : ಚೆನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 30ರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಎಕ್ಸ್ಪ್ರೆಸ್ ಹೈವೇ ಬಂದ್ ಇರಲಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರು ಪ್ರಯಾಣ ಮಾಡಬಹುದಾಗಿದೆ. ಮೈಸೂರಿನಿಂದ ಬರುವ ವಾಹನಗಳು ಮದ್ದೂರು- ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದಾಗಿದೆ.

ಮಾರ್ಗ ಬದಲಾವಣೆ ಮಾಡಿ ರಾಮನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಭಾನುವಾರ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಂ ಉಂಟಾಗುವ ಸಾಧ್ಯತೆಯಿದೆ.






