ಬೆಂಗಳೂರು:ಇತ್ತೀಚೆಗೆ ಕೋಲ್ಕತ್ತಾದ ವೈದ್ಯ (Kolkata Doctor )ವಿದ್ಯಾರ್ಥಿನಿಯ ಅತ್ಯಾಚಾರ rape & ಕೊಲೆ murder )ಪ್ರಕರಣದಿಂದ ಇಡೀ ದೇಶಾದ್ಯಂತ ಕಿಡಿಹೊತ್ತಿದ್ದಲ್ಲದೇ, ಅವರ ಸುರಕ್ಷತೆ ಬಗ್ಗೆಯೂ ನೂರಾರು ಪ್ರಶ್ನೆಗಳು ಹುಟ್ಟಿಕೊಂಡವು.
ಇದೀಗ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮಹಿಳಾ ಆರೋಗ್ಯ ಸಿಬ್ಬಂದಿಯ ರಕ್ಷಣೆಗೆ ಅತ್ಯಾಧುನಿಕ AI ತಂತ್ರಜ್ಞಾನದ ವ್ಯವಸ್ಥೆ ಅಳವಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Minister Dr. Sharan Prakash Patil)ಮಾಹಿತಿ ನೀಡಿದರು.
ವೈದ್ಯಕೀಯ ಕ್ಯಾಂಪಸ್‌ಗಳಲ್ಲಿ (medical campuses )ಸಮಗ್ರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು AI (ಕೃತಕ ಬುದ್ದಿಮತ್ತೆ) ತಂತ್ರಜ್ಞಾನದ ಮೂಲಕ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲಾಗುತ್ತದೆ. ಮಹಿಳಾ ಆರೋಗ್ಯ ಸಿಬ್ಬಂದಿ ಆವರಣದಿಂದ ಹೊರಹೋಗುವ ಅಗತ್ಯ ಎದುರಾಗಬಾರದು. ಅವರಿಗೆ ದಿನದ 24 ಗಂಟೆಯೂ ಕ್ಯಾಂಟೀನ್ ಸೌಲಭ್ಯಗಳನ್ನು ಕಲ್ಪಿಸಬೇಕು. ಕೇಂದ್ರ ಹಾಗೂ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸುರಕ್ಷಿತ ಕೆಲಸದ ವಾತಾವರಣ ನಿರ್ಮಿಸಬೇಕಾಗಿದೆ ಎಂದರು.
ಇಂದು ಸಚಿವರು ವಿಕಾಸಸೌಧದಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಉನ್ನತಮಟ್ಟದ ಸಭೆ ನಡೆಸಿ ಈ ಮೇಲಿನ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ವೆಂಕಟೇಶಮೂರ್ತಿ, ರಾಷ್ಟ್ರೀಯ ವೈದ್ಯಕೀಯ ಮಿಷನ್ ನಿರ್ದೇಶಕರಾದ ವೈ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.