ಕನ್ನಡ ಚಿತ್ರರಂಗದ (Sandalwood) ಹೆಸರಾಂತ ಹಾಸ್ಯ ಕಲಾವಿದ ಮತ್ತು ಅತ್ಯುತ್ತಮ ಸಂಗೀತ ನಿರ್ದೇಶಕ ಸಾಧು ಕೋಕಿಲ (Sadhu kokila) ಅವರಿಗೆ ಗೌರವ ಡಾಕ್ಟ್ರೇಟ್ ನೀಡಿ ಗೌರವಿಸಲಾಗಿದೆ.
ಈ ಬಗ್ಗೆ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಾಧು ಕೋಕಿಲ ಅವರು, ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.
ಸಾಧು ಕೋಕಿಲ ಅವರಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಒಲಿದುಬಂದಿದ್ದು, ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಗಬಹುದು ಎಂಬ ಊಹಪೋಹಗಳು ಕೂಡ ಕೇಳಿಬಂದಿದ್ದವು.