
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಪಟ್ಟಿಯಿಂದ ಪೂರ್ವಾಂಚಲಿಗಳ ಹೆಸರನ್ನು ಅಳಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ದೆಹಲಿಯಲ್ಲಿ ವಾಸಿಸುತ್ತಿರುವ ಪೂರ್ವಾಂಚಲಿಗಳನ್ನು ಸಂಸತ್ತಿನಲ್ಲಿ ರೋಹಿಂಗ್ಯಾಗಳಿಗೆ ಹೋಲಿಸಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸಲು ಎಎಪಿ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.