ಬೆಂಗಳೂರು: ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸಿ ಬಂಧನಕ್ಕೆ ಒಳಗಾಗಿದ್ದ AVR ಗ್ರೂಪ್ ಮಾಲೀಕ ಅರವಿಂದ ವೆಂಕಟೇಶ್ ರೆಡ್ಡಿಗೆ ಜಾಮೀನು ಸಿಕ್ಕಿದೆ.
ನಿನ್ನೆ ರಾತ್ರಿ ಅರವಿಂದ್ ರನ್ನ ಬಂಧಿಸಿದ್ದ ಗೋವಿಂದರಾಜ ನಗರ ಪೊಲೀಸರು ಕಿರುಕುಳ ಆರೋಪ ಸಂಬಂಧ ವಿಚಾರಣೆ ನಡೆಸಿದ್ದರು. ಬಳಿಕ ಸಂಜೆ 46ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ನ್ಯಾಯಾಲಯದಲ್ಲಿ
ಅರವಿಂದ್ ಗೆ ಜಾಮೀನು ಮಂಜೂರು ಆಗಿದ್ದು ಅರವಿಂದ್ ಬಿಡುಗಡೆಯಾಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿ ವಿರುದ್ಧ ಕಳೆದ ತಿಂಗಳು 17ರಂದು ಎಫ್ಐಆರ್ ದಾಖಲಾಗಿತ್ತು.
ಅರವಿಂದ್ ರಿಯಲ್ ಎಸ್ಟೇಟ್ ಉದ್ಯಮಿ. ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ನಾಯಕ ಕೂಡ ಹೌದು. ಆತ ಸಿನಿಮಾ ನಿರ್ಮಾಪಕ ಕೂಡ ಹೌದು. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ. ಅದೇ ಟೂರ್ನಮೆಂಟ್ ಒಂದರಲ್ಲಿ ಸಂತ್ರಸ್ಥೆ ಪರಿಚಯವಾಗಿದ್ದರು.











