• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 26, 2025
in Top Story, ಕರ್ನಾಟಕ
0
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ನಾವು ಒಂದೇ ರಾಜ್ಯದವರು. ನೀರಿಗಾಗಿ ನಾವು ನಾವೇ ಕಿತ್ತಾಟ ನಡೆಸುವುದು ಬೇಡ. ಎಲ್ಲರಿಗೂ ಸರಿಯಾದ ರೀತಿಯಲ್ಲಿ ನೀರನ್ನು ನೀಡಲಾಗುವುದು. ನೆರೆ ರಾಜ್ಯದವರ ಜೊತೆ ತಿಕ್ಕಾಟ ನಡೆಸುವಂತೆ ನಾವು, ನಾವೇ ಕಿತ್ತಾಡುವುದು ಸರಿಯಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಗುಬ್ಬಿ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ “ಮಠದ ಹಳ್ಳ” ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

“ಬೆಂಗಳೂರಿನಲ್ಲಿ ಕಾವೇರಿ ಆರತಿ ಮಾಡಿ ಪ್ರಾರ್ಥನೆ ಮಾಡಿದೆ. ಕಾವೇರಿ ತಾಯಿ ಕೃಪೆಯಿಂದ ಮುಂಗಾರು ಆರಂಭವಾಗುವ ಮುನ್ನವೇ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು ಬಹುತೇಕೆ ತುಂಬಿವೆ. ಕಳೆದ ವರ್ಷ 30% ತುಂಬಿದ್ದ ಕೆಆರ್ ಎಸ್ ಈ ವರ್ಷ 89% ತುಂಬಿದೆ. ಕಳೆದ ವರ್ಷ 30% ತುಂಬಿದ್ದ ಹೇಮಾವತಿ 85% ತುಂಬಿದೆ. ಕಳೆದ ವರ್ಷ 40% ತುಂಬಿದ್ದ ಹಾರಂಗಿ ಈ ವರ್ಷ 70% ತುಂಬಿದೆ. 51% ತುಂಬಿದ್ದ ಕಬಿನಿ ಈ ವರ್ಷ 80% ತುಂಬಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

Dk shivakumar ಜಲ ನಿಗಮದ ಅಧಿಕಾರಿಗಳು ಅವರ ಬದುಕಿನಲ್ಲೇ ಒಂದು ಇತಿಹಾಸ ಬರೆದಿದ್ದಾರೆ. #pratidhvani #dkshivakumar

“ಬಹಳ ಸಂತೋಷದಿಂದ ಇಂದು ಈ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದೇನೆ. ವಾಸು ಅವರ ಕ್ಷೇತ್ರ ಬೇರೆ ಅಲ್ಲ, ಡಿ.ಕೆ. ಶಿವಕುಮಾರ್ ಕ್ಷೇತ್ರ ಬೇರೆ ಅಲ್ಲ. ಇದು ನಮ್ಮ ಕ್ಷೇತ್ರ. ಯಾರು ಎಷ್ಟೇ ವಿರೋಧ ಮಾಡಲಿ, ಇಲ್ಲಿನ ರೈತರಿಗಾಗಿ ಏನು ಕೆಲಸ ಮಾಡಬೇಕೋ ನಾವು ಅದನ್ನು ಮಾಡುತ್ತೇವೆ. ಟಿ.ಬಿ ಜಯಚಂದ್ರ ಅವರಂತೆಯೇ ವಾಸು ಅವರೂ ನೀರಾವರಿ ಯೋಜನೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದಾರೆ. ನೀವು ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

“ಪಕ್ಕದ ರಂಗನಹಳ್ಳಿಯವರು ನಮ್ಮ ಊರಿಗೂ ನೀರು ಕೊಡಿ ಎಂದು ಮನವಿ ಸಲ್ಲಿಸಿದರು. ಅವರ ಗ್ರಾಮಕ್ಕೂ ನೀರು ಪೂರೈಸಲಾಗುವುದು” ಎಂದು ಭರವಸೆ ನೀಡಿದರು.

“ಕುಮಾರಸ್ವಾಮಿ ಅವರು ಎತ್ತಿನಹೊಳೆ ನೀರು ಹೊರಗೆ ಹರಿಸುವುದು ಅಸಾಧ್ಯ ಎಂದಿದ್ದರು. ನಾವು ಅದನ್ನು ಸಾಧ್ಯವಾಗಿಸಿದ್ದೇನೆ. ಮಾತನಾಡುವವರು ಕಣ್ಣಾರೆ ನೋಡಲಿ ಎಂದು ನೀರನ್ನು ಹರಿಸಿದ್ದೇವೆ. ಅದು ನಿಮ್ಮ ಜಿಲ್ಲೆ ಗಡಿವರೆಗೂ ಬಂದಿದೆ. ಕೆಲವು ಕಡೆ ಅರಣ್ಯ ಇಲಾಖೆ ಸಮಸ್ಯೆ ಇದೆ. ಹಾಸನ ಹಾಗೂ ಜಿಲ್ಲಾಧಿಕಾರಿಗಳು ಭೂಮಿ ನೀಡಿದ್ದು, ಆದಷ್ಟು ಬೇಗ ಇಲ್ಲಿಗೆ ನೀರು ಹರಿಯಲಿದೆ” ಎಂದು ತಿಳಿಸಿದರು.

“ನಾನು ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರದಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದೇವೆ. ಈ ವಿಚಾರವಾಗಿ ಪರಮೇಶ್ವರ್ ಅವರ ಜೊತೆ ಮಾತನಾಡಿದ್ದೇನೆ. ರೈತರು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ನಾವು ಕನಿಷ್ಠ 3 ಟಿಎಂಸಿ ನೀರು ಸಂಗ್ರಹ ಮಾಡದಿದ್ದರೆ, ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ನೀರು ನೀಡಲು ಸಾಧ್ಯವಿಲ್ಲ. ಹೀಗಾಗಿ ಈ ಯೋಜನೆ ಜಾರಿಗೆ ತಾಂತ್ರಿಕ ಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಿದ್ದು, ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡುತ್ತೇನೆ” ಎಂದು ತಿಳಿಸಿದರು.

“ಈ ಯೋಜನೆಯಲ್ಲಿ ಮೊದಲು ಕುಡಿಯುವ ನೀರನ್ನು ಪೂರೈಸಬೇಕು. ಆನಂತರ ಕೆರೆಗಳಿಗೆ ನೀರು ತುಂಬಿಸಲಾಗುವುದು. ಎಲ್ಲರಿಗೂ ಸರಿಯಾಗಿ ನೀರು ಹಂಚುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

“ಹೇಮಾವತಿ ನೀರು ಬರುತ್ತಿದೆ. ಎತ್ತಿನಹೊಳೆ ನೀರನ್ನು ಕಳೆದ ವರ್ಷ ವಾಣಿ ವಿಲಾಸಕ್ಕೆ ಹರಿಸಲಾಗಿತ್ತು. ಕಾವೇರಿ ಅಂತಿಮ ತೀರ್ಪಿನಂತೆ ನೀರನ್ನು ಹೇಮಾವತಿ ತುಂಬಿಸಲಾಗುವುದು. ಇನ್ನು ಸ್ಥಳೀಯ ನಾಯಕರ ಮನವಿಯಂತೆ ಈ ಭಾಗದ ಕಾಲುವೆಗಳಿಗೆ ಎರಡು ದಿನಗಳಲ್ಲಿ ನೀರನ್ನು ಹರಿಸಿ ಕೆರೆ ತುಂಬಿಸಲು ಸೂಚನೆ ನೀಡಲಾಗುವುದು” ಎಂದು ತಿಳಿಸಿದರು.

“ಕೋಲಾರದಲ್ಲಿ 2 ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಬರದ ಸ್ಥಿತಿ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ನೀರು ತರಲಾಗುತ್ತಿದೆ” ಎಂದು ತಿಳಿಸಿದರು.

“ಇಲ್ಲಿರುವ ಮೇಲ್ಗಾಲುವೆ ದೇಶದಲ್ಲಿ ಬೇರೆ ಎಲ್ಲೂ ಇಲ್ಲ. ಇದಕ್ಕಾಗಿ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿದೆ. ನಿಮ್ಮ ಸಹಕಾರ ಇರಲಿ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಶ್ರಮಿಸುತ್ತೇವೆ. ನೀವು ಶಾಸಕ ಗುಬ್ಬಿ ವಾಸು ಅವರ ಪರವಾಗಿ ನಿಲ್ಲಿ. ನಾನು ನಿಮ್ಮ ಪರ ನಿಲ್ಲುತ್ತೇನೆ” ಎಂದು ತಿಳಿಸಿದರು.

Tags: modi speech in tumakurumodi speech in tumkurtumkurTumkur Newsyetthinahole projectYettinaholeyettinahole drinking water projectYettinahole Projectyettinahole project detailsyettinahole project latest newsyettinahole project mapyettinahole project newsyettinahole project planyettinahole project reportyettinahole project statusyettinahole project tumkuryettinahole project tumkur chikkaballapuryettinahole stream diversion project
Previous Post

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

Next Post

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada