• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡಯುವಂತೆ ಸೂಚಿಸಿದ ಸಚಿವ ಅಶ್ವತ್ಥನಾರಾಯಣ

Any Mind by Any Mind
August 28, 2021
in ಕರ್ನಾಟಕ
0
ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡಯುವಂತೆ ಸೂಚಿಸಿದ ಸಚಿವ ಅಶ್ವತ್ಥನಾರಾಯಣ
Share on WhatsAppShare on FacebookShare on Telegram

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ADVERTISEMENT

ಬೆಂಗಳೂರಿನಲ್ಲಿ ಶನಿವಾರ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಕುಲಪತಿ ಪ್ರೊ.ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಸಾಮಾನ್ಯವಾಗಿ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳು ಬಹಳ ವಿಶಾಲವಾಗಿರುತ್ತವೆ ಎಂಬುದೇನೋ ನಿಜ. ಹಾಗಂತ ವಿದ್ಯಾರ್ಥಿನಿಯರು ಓಡಾದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾದ ವಿವಿ ಕ್ಯಾಂಪಸ್ ಗಳನ್ನು ರೂಪಿಸಬೇಕೆಂದು ಎಲ್ಲ ವಿವಿ ಕುಲಪತಿಗಳಿಗೂ ಸಚಿವರು ಸೂಚಿಸಿದ್ದಾರೆ.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆ ನಡೆಯಿತು ಎನ್ನುವ ಕಾರಣಕ್ಕೆ ಹೆಣ್ಣುಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ಅವರಿಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳಲ್ಲಿ ಹೆಚ್ಚು ನಿಗಾ ವಹಿಸುವ  ಕೆಲಸ ಆಗಬೇಕು. ಈಗಾಗಲೇ ಆ ಬಗ್ಗೆ ಸರಕಾರದಿಂದ ಕ್ರಮ ವಹಿಸಲಾಗಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಎಲ್ಲ ಕಡೆಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕಾನೂನು-ಸುವವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ದಿಕ್ಕಿನಲ್ಲೂ ತೀವ್ರ ನಿಗಾ ಇಟ್ಟಿರಬೇಕು. ಈ ಬಗ್ಗೆ ಎಲ್ಲ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದಿದ್ದಾರೆ.

ಕುಲಪತಿಗಳ ಜತೆ‌ ಚರ್ಚೆ:

ರಾಜ್ಯದಲ್ಲಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಒಟ್ಟು 32ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿದ್ದು, ಎಲ್ಲಡೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲ ಕಡೆ ಭದ್ರತಾ ವ್ಯವಸ್ಥೆ ಉತ್ತಮವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಲಭ್ಯವಿರುವ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಭದ್ರತೆ ಮತ್ತು ನಿಗಾ ಹೆಚ್ಚಿಸುವ ನಿಟ್ಟಿನಲ್ಲಿ ಏನೇನು ಮಾಡಬಹುದು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುತ್ತೇನೆ. ಸಂಬಂಧಿತ ಇಲಾಖೆ ಹಾಗೂ ಎಲ್ಲ ಕುಲಪತಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳು. ಪಾತಕಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.

Tags: BJPGang RapeMysorerestrictsUniversity of MysoreWomenಬಿಜೆಪಿ
Previous Post

ಕೃಷಿ ಕಾನೂನುಗಳ ವಿರುದ್ದ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

Next Post

ಮರೆಯಲಾಗದ ದಲಿತ ನಾಯಕ – ಅಯ್ಯನ್ ಕಾಳಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಮರೆಯಲಾಗದ ದಲಿತ ನಾಯಕ – ಅಯ್ಯನ್ ಕಾಳಿ

ಮರೆಯಲಾಗದ ದಲಿತ ನಾಯಕ - ಅಯ್ಯನ್ ಕಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada