ನಮ್ಮ ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಸದ್ದಿಲ್ಲದೆ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿರುತ್ತವೆ, ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಕಾಕ್‌ಟೈಲ್ ಚಿತ್ರತಂಡ.
ಈಗಾಗಲೇ ಟೈಟಲ್ ಮೂಲಕ ಸಿನಿರಸಿಕರ ಗಮನ ಸೆಳೆದಿರುವ ಚಿತ್ರತಂಡಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್ ನೀಡಿದ್ದು ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.
ನಾಯಕ ವೀರೆನ್ ಕೇಶವ್ ಮಾತನಾಡಿ ನಾಲ್ಕೈದು ಡ್ರಿಂಕ್ಸ್ ಗಳ ಮಿಶ್ರಣಕ್ಕೆ ಕಾಕ್‌ಟೈಲ್ ಎನ್ನುತ್ತಾರೆ. ನಮ್ಮ ಸಿನಿಮಾದಲ್ಲೂ ಹಾಗೆ. ಲವ್ ಇದೆ ಲವ್ ಜಾನರ್ ಸಿನಿಮಾ ಅಲ್ಲ. ಸೆಂಟಿಮೆಂಟ್ ಇದೆ ಸೆಂಟಿಮೆಂಟ್ ಸಿನಿಮಾ ಅಲ್ಲ. ಎಲ್ಲಾ ಅಂಶಗಳನ್ನು ಒಳಗೊಂಡಿರುವ ಬೇರೆಯದೆ ರೀತಿಯ ಸಿನಿಮಾ ನಮ್ಮದು. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.

ನಿರ್ದೇಶಕ ಶ್ರೀರಾಮ್ ಮಾತನಾಡಿ ನನಗೆ ಸುಮಾರು ಹದಿನೈದು ವರ್ಷಗಳಿಂದ ಚಿತ್ರರಂಗದ ಜೊತೆ ನಂಟು. “ಕಾಕ್ಟೈಲ್” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಲವ್, ಹಾರಾರ್, ಸೆಂಟಿಮೆಂಟ್, ಸಸ್ಪೆನ್ಸ್ ಥ್ರಿಲ್ಲರ್ ಎಲ್ಲವೂ ಇದೆ. ಇದು ಒಂದೇ ಜಾನರ್ ನ ಚಿತ್ರವಲ್ಲ. ಕನ್ನಡದಲ್ಲಿ ಇದು ಹೊಸ ನರೇಶನ್ ಸಿನಿಮಾ. ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಕೆಲವು ಸ್ನೇಹಿತರು ಸಹ ಮೆಚ್ಚುಗೆ ಸೂಚಿಸಿದರು. ಚಿತ್ರ ಉತ್ತಮವಾಗಿ ಬರಲು ಕಾರಣ ನನ್ನ ತಂಡ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ನಿರ್ಮಾಪ ಡಾ || ಶಿವಪ್ಪ ಮಾತನಾಡಿ ನಾನು ಈ ಸಮಯದಲ್ಲಿ ಮೊದಲು ನೆನಪಿಸಿಕೊಳ್ಳುವುದು ಪುನೀತ್ ರಾಜಕುಮಾರ್ ಅವರನ್ನು. ನನ್ನ ಮಗನನ್ನು ನಾಯಕನನ್ನಾಗಿ ಮಾಡುವದಿಂದ ಹಿಡಿದು, ನಮ್ಮ ಚಿತ್ರದ ಕುರಿತಾದ ಎಲ್ಲಾ ವಿಷಯಗಳನ್ನು ಅವರ ಬಳಿ ಹಂಚಿಕೊಳ್ಳುತ್ತಿದ್ದೆ. ಅವರು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರು. ನಿಮ್ಮೊಂದಿಗೆ ನಾನು ಇರುತ್ತೇನೆ ಎಂದು ಧೈರ್ಯ ತುಂಬುತ್ತಿದ್ದರು. ಚಿತ್ರ ಬಿಡುಗಡೆಯ ಹೊತ್ತಿಗೆ ಅವರಿಲ್ಲದುರುವುದು ತುಂಬಾ ದುಃಖವಾಗುತ್ತಿದೆ.
ಇಂದು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಅಶ್ವಿನಿ ಪುನೀತ್ ರಾಜಕುಮಾರ್ ಬಂದಿದ್ದಾರೆ. ಅವರಿಗೆ ಅನಂತ ಧನ್ಯವಾದಗಳು ಎಂದು ಹೇಳಿದ್ದಾರೆ.













