ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಆಗಸ್ಟ್ 28ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿವೆ.
ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್ ಟೂರ್ನಿ ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಮೊದಲ ಪಂದ್ಯದಲ್ಲಿ ಸಂಪ್ರದಾಯಿಕ ಎದುರಾಳಿ ತಂಡಗಳು ಎದುರಾಗಲಿವೆ.
ಆರ್ಥಿಕ ದುಸ್ಥಿತಿ ಎದುರಿಸುತ್ತಿರುವ ಶ್ರೀಲಂಕಾ ಏಷ್ಯಾಕಪ್ ಟೂರ್ನಿ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ದುಬೈಗೆ ಟೂರ್ನಿ ಸ್ಥಳಾಂತರಗೊಂಡಿತ್ತು.
ಭಾರತ ಮತ್ತು ಪಾಕಿಸ್ತಾನ ತಂಡಗಳು ಲೀಗ್ ನಲ್ಲಿ ಸ್ಪರ್ಧಿಸಿದ ನಂತರ ಮತ್ತೊಮ್ಮೆ ಕ್ವಾಲಿಫೈಯರ್ ಸುತ್ತಿನಲ್ಲಿ ಮುಖಾಮುಖಿ ಎದುರಾಗುವ ಸಾಧ್ಯತೆ ಇದೆ.