ಭಾರತ ತಂಡದಲ್ಲಿ ಮಿಂಚುತ್ತಿರುವ ಸೂರ್ಯಕುಮಾರ್ ಏಷ್ಯಾಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಐಸಿಸಿ ಟಿ-20 ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕುವ ಅವಕಾಶ ಪಡೆದಿದ್ದಾರೆ.
ಐಸಿಸಿ ಟಿ-20 ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಅಗ್ರಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಪ್ರಸ್ತುತ 2ನೇ ಸ್ಥಾನದಲ್ಲಿದ್ದು, ಅಂಕಗಳ ಅಂತರ ಕಡಿಮೆ ಇದೆ.
ಸೂರ್ಯಕುಮಾರ್ ಟಿ-20 ಕ್ರಿಕೆಟ್ ನಲ್ಲಿ ಶತಕ ಸಿಡಿಸಿದ ಕೆಲವೇ ಭಾರತೀಯ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ರೋಹಿತ್ ಶರ್ಮ, ಕೆಎಲ್ ರಾಹುಲ್, ದೀಪಕ್ ಹೂಡಾ ಸುರೇಶ್ ರೈನಾ, ದೀಪಕ್ ಹೂಡಾ ನಂತರ ಸೂರ್ಯಕುಮಾರ್ ಈ ಸಾಧನೆ ಮಾಡಿದ್ದಾರೆ.
2021ರಲ್ಲಿ ಟಿ-೨೦ಗೆ ಪಾದರ್ಪಣೆ ಮಾಡಿದ ನಂತರ ಸೂರ್ಯಕುಮಾರ್ ದಿನದಿಂದ ದಿನಕ್ಕೆ ತಮ್ಮ ಪ್ರದರ್ಶನ ಉತ್ತಮಪಡಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಂಡದಲ್ಲಿ ಪ್ರಮುಖ ಬ್ಯಾಟ್ಸ್ ಮನ್ ಆಗಿ ಗುರುತಿಸಿಕೊಂಡಿದ್ದಾರೆ.