ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಿದ್ದರಾಮಯ್ಯ ಅವರು ಮಂಗಳವಾರ (ಆಗಸ್ಟ್ 8) ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬೆಳಕಿಗೆ ತರಲಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈ ಸದ್ದಿ ಓದಿದ್ದೀಋರಾ? ಸೌಜನ್ಯ ಪ್ರಕರಣ | ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು ; ವಸಂತ ಬಂಗೇರ ಸ್ಫೋಟಕ ಹೇಳಿಕೆ
ಬಿಬಿಎಂಪಿ, ಬಿಡಿಎನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
ಉಡುಪಿ ವಿಡಿಯೊ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಅಗತ್ಯವಿರುವುದರಿಂದ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.











