• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಅಸ್ಸಾಂ : ಐದು ವರ್ಷಗಳ ಹಿಂದೆ ಮೃತರಾದ ವ್ಯಕ್ತಿಗೆ ಪೌರತ್ವ ಸಾಬೀತುಪಡಿಸುವಂತೆ ನೋಟಿಸ್‌!

ಪ್ರತಿಧ್ವನಿ by ಪ್ರತಿಧ್ವನಿ
March 23, 2022
in ದೇಶ
0
ಅಸ್ಸಾಂ : ಐದು ವರ್ಷಗಳ ಹಿಂದೆ ಮೃತರಾದ ವ್ಯಕ್ತಿಗೆ ಪೌರತ್ವ ಸಾಬೀತುಪಡಿಸುವಂತೆ ನೋಟಿಸ್‌!
Share on WhatsAppShare on FacebookShare on Telegram

ಅಸ್ಸಾಂನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಪೌರತ್ವ ಪರಿಶೀಲನೆ ಪ್ರಕ್ರಿಯೆಯು ಇದೀಗ ಮತ್ತೊಂದು ಎಡವಟ್ಟನ್ನು ಮಾಡಿಕೊಂಡಿದೆ. ಅಸ್ಸಾಂನ ವಿದೇಶಿಯರ ನ್ಯಾಯಮಂಡಳಿಯು 2016 ರಲ್ಲಿ ಮೃತರಾದ ವ್ಯಕ್ತಿಯೊಬ್ಬರಿಗೆ ಅವರು ಭಾರತದ ಪ್ರಜೆಯೇ ಎಂದು ಸಾಬೀತುಪಡಿಸಲು ನೋಟಿಸ್ ಕಳುಹಿಸಿ ವಿವಾದ ಸೃಷ್ಟಿಸಿದೆ.

ADVERTISEMENT

ಮಾರ್ಚ್ 15 ರಂದು ನ್ಯಾಯಮಂಡಳಿಯು ಮೃತ ಶ್ಯಾಮ ಚರಣ್ ದಾಸ್ ಅವರಿಗೆ ನೋಟಿಸ್‌ ಕಳುಹಿಸಿದ್ದು ಮಾರ್ಚ್ 30 ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ವಿಶೇಷವೆಂದರೆ, ಸೆಪ್ಟೆಂಬರ್ 23, 2016 ರಲ್ಲಿ ಅದೇ ನ್ಯಾಯಾಲಯವು ಚರಣ್ ದಾಸ್ ಅವರ ಪೌರತ್ವಕ್ಕೆ ಸಂಬಂಧಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಪ್ರಕರಣವನ್ನು ಮುಕ್ತಾಯಗೊಳಿಸುಲು ದಾಸ್‌ ಅವರ ಕುಟುಂಬವು ದಾಸ್‌ ಅವರ ಮರಣ ಪ್ರಮಾಣ ಪತ್ರವನ್ನು ನ್ಯಾಯಮಂಡಳಿಗೆ ಸಲ್ಲಿಸಿದ್ದರು. ನ್ಯಾಯಮಂಡಳಿಗೆ ಸಲ್ಲಿಸಿದ, ಅಸ್ಸಾಂ ಸರ್ಕಾರ ನೀಡಿದ ಮರಣ ಪ್ರಮಾಣಪತ್ರದ ಪ್ರಕಾರ, ದಾಸ್ ಅವರು ಮೇ 6, 2016 ರಂದು ನಿಧನರಾಗಿದ್ದಾರೆ.

ಆದಾಗ್ಯೂ, ಈ ವರ್ಷದ ಆರಂಭದಲ್ಲಿ, ಅವರನ್ನು ದಾಖಲೆ ರಹಿತ ಅಕ್ರಮ ವಲಸಿಗ ಎಂದು ಶಂಕಿಸಿರುವ ಗಡಿ ಪೊಲೀಸರು ದಾಸ್ ವಿರುದ್ಧ ಹೊಸ ಪ್ರಕರಣವನ್ನು ದಾಖಲಿಸಿದ್ದಾರೆ. ಅದರ ಆಧಾರದಲ್ಲಿ ನ್ಯಾಯಾಲಯವು ನೋಟಿಸ್ ನೀಡಿದೆ ಎಂದು scroll.in ವರದಿ ಮಾಡಿದೆ.

ದಾಸ್ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಜನವರಿ 1, 1966 ಮತ್ತು ಮಾರ್ಚ್ 23, 1973 ರ ನಡುವೆ ಅಸ್ಸಾಂಗೆ ಪ್ರವೇಶಿಸಿ ಸಿಲ್ಚಾರ್‌ ಪ್ರದೇಶದಲ್ಲಿ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಅದರ ಆಧಾರದ ಮೇಲೆ ನ್ಯಾಯಮಂಡಳಿಯ ನೋಟಿಸ್‌ ಜಾರಿಯಾಗಿದೆ ಎಂದು ವರದಿಯಾಗಿದೆ.

ಮೃತ ತಂದೆಯನ್ನು ಹಾಜರಾಗಲು ಕೋರ್ಟ್‌ ನೋಟಿಸ್‌ ನೀಡಿದ್ದು ಕುಟುಂಬಸ್ಥರಿಗೆ ಆಘಾತ ತಂದಿದೆ. ತನ್ನ ತಂದೆಯ ಪೌರತ್ವವನ್ನು ಸಾಬೀತುಪಡಿಸಲು ಬೇಕಾದ ಎಲ್ಲಾ ಅವಶ್ಯಕ ದಾಖಲೆಗಳನ್ನು ಇದ್ದರೂ, ಪೌರತ್ವ ಸಾಬೀತುಪಡಿಸಲು ಅವರು ನ್ಯಾಯಾಲಯದಲ್ಲಿ ಬಹಳ ವರ್ಷಗಳ ಕಾಲ ಹೋರಾಡಿದ್ದರು ಎಂದು ದಾಸ್ ಪುತ್ರಿ ಬೇಬಿ ದಾಸ್ ತಿಳಿಸಿದ್ದಾರೆ.

ಐದು ವರ್ಷಗಳ ಹಿಂದೆ ನಾವು ನಮ್ಮ ತಂದೆಯನ್ನು ಕಳೆದುಕೊಂಡಿದ್ದೇವೆ. ಆದರೀಗ, ಅವರ ಮರಣದ ನಂತರ, ನಾವು ಅವರ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ. ಇದಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ನನಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಘಟನೆಯು ವ್ಯವಸ್ಥೆಯ ಮೇಲೆ ಕಳಪೆಗೆ ನಿರ್ವಹಣೆಗೆ ಸಾಕ್ಷಿ ಎಂದು ಸಾಮಾಜಿಕ ಕಾರ್ಯಕರ್ತ ಕಮಲ್ ಚಕ್ರವರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಪರಿಶೀಲನೆಯ ಆಧಾರದ ಮೇಲೆಯೇ ಮೃತ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅಂದರೆ, ಪೊಲೀಸರು ಆರೋಪಿಯ ಮನೆಗೆ ದಾಖಲೆಗಳನ್ನು ಪರಿಶೀಲಿಸಲು ಕೂಡಾ ಭೇಟಿ ನೀಡಲಿಲ್ಲ ಎಂದು ಇದರ ಮೂಲಕ ಅರ್ಥವಾಗುತ್ತದೆ. ತುಂಬಾ ಮಂದಿಗೆ ಕೋರ್ಟ್‌ ನೋಟಿಸ್‌ ನೀಡಿರುವುದರಿಂದ ಇದು ಅಪಾಯಕಾರಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Tags: ಅಸ್ಸಾಂಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಅಸ್ಸಾಂ ಸರಕಾರಅಸ್ಸಾಂ ಸರ್ಕಾರಪೌರತ್ವಪೌರತ್ವ ಕಾಯಿದೆ ತಿದ್ದುಪಡಿಪೌರತ್ವ ಕಾಯ್ದೆಪೌರತ್ವ ತಿದ್ದುಪಡಿ ಕಾನೂನುಪೌರತ್ವ ತಿದ್ದುಪಡಿ ಕಾಯ್ದೆ 2019ಪೌರತ್ವ ನಿರಾಶ್ರಿತರು
Previous Post

ಹಿಜಾಬ್‌ ನಿರ್ಬಂಧ: ಉಡುಪಿಯಲ್ಲಿ ತರಗತಿಗಳಿಂದ ವಂಚಿತಗೊಂಡ 400ಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು

Next Post

ಕಾಶ್ಮೀರಿ ಪಂಡಿತರ ಪುನರ್ವಸತಿ : ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಕಾಶ್ಮೀರಿ ಪಂಡಿತರ ಪುನರ್ವಸತಿ : ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

ಕಾಶ್ಮೀರಿ ಪಂಡಿತರ ಪುನರ್ವಸತಿ : ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

Please login to join discussion

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!