ಮಣಿಪುರದ ಚುರಾಚಂದ್ಪುರ ಜಿಲ್ಲೆಯ ಸಿಂಘತ್ ಉಪವಿಭಾಗದಲ್ಲಿರುವ ಅಸ್ಸಾಂ ರೈಫಲ್ಸ್ ಘಟಕದ ಭಾರತೀಯ ಸೇನೆಯ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ಶನಿವಾರ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸೇನೆಯ ಕಮಾಂಡೆಂಟ್ ಸೇರಿದಂತೆ ಆರು ಜನರು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಅಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್ ಆಫೀಸರ್, ಅವರ ಪತ್ನಿ, ಮಗ ಮತ್ತು ಮೂವರು ಸೈನಿಕರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನು ಕೆಲವರು ಗಾಯಗೊಂಡಿದ್ದಾರೆ. ಆದರೆ, ಸೇನಾ ಮೂಲಗಳಿಂದ ಇನ್ನಷ್ಟೆ ಅಧಿಕೃತ ಮಾಹಿತಿ ಹೊರ ಬರಬೇಕಾಗಿದೆ.
ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬೆಹಿಯಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಸೆಹ್ಕೆನ್ ಗ್ರಾಮದ ಬಳಿ ಈ ಘಟನೆ ನಡೆದಿದೆ.