ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರದೇಶದಲಿ 5.6 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದ ಪರಿಣಾಮ 46ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ʻಘಟನೆಯಲ್ಲಿ ಡಜನ್ಗೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದ್ದು ಸುಮಾರು 700ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಸಿಯಾಂಜುರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದ್ದು ಭೂಮಿಯ 10 ಕಿಲೋಮೀಟರ್ (6.2) ಆಳದಲ್ಲಿ ಭೂಮಿ ಕಂಪಿಸಿದೆ.
ರಾಜಧಾನಿ ಜಕಾರ್ತದಿಂದ ಸುಮಾರು 75 ಕಿಲೋಮೀಟರ್ ದೂರದಲ್ಲಿರುವ ಸಿಯಾಂಜುರ್ ಪ್ರದೇಶದಲ್ಲಿ ಸುನಾಮಿ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.