• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರ ಮಟ್ಟದಲ್ಲಿ ಸಚಿವ ಕೆ.ಜೆ ಜಾರ್ಜ್​ ಭರ್ಜರಿ ಪ್ರಚಾರ..

ಕೃಷ್ಣ ಮಣಿ by ಕೃಷ್ಣ ಮಣಿ
November 13, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

ರಾಜ್ಯದ ಮೂರು ಕ್ಷೇತ್ರಗಳ ಮತದಾನ ಇಂದು ನಡೆಯುತ್ತಿದೆ. ಇಷ್ಟು ದಿನಗಳ ಕಾಲ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಯಲ್ಲಿ ಮತಯಾಚನೆ ಮಾಡಿದ್ದ ಕಾಂಗ್ರೆಸ್​ ನಾಯಕರ ದಂಡು, ಇದೀಗ ದೇಶದ ಇತರೆ ರಾಜ್ಯಗಳಲ್ಲಿ ಸಮುದಾಯವಾರು ಮತಯಾಚನೆ ಮಾಡುತ್ತಿದ್ದು, ರಾಜ್ಯ ಇಂಧನ ಸಚಿವ ಕೆ.ಜೆ ಜಾರ್ಜ್​ ಮಹಾರಾಷ್ಟ್ರದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮಹಾರಾಷ್ಟ್ರ ಚುನಾವಣೆ ಮೇಲೆ ದೃಷ್ಟಿ ನೆಟ್ಟಿದ್ದು, ಈ ಬಾರಿ ಮಹಾ ವಿಕಾಸ್​ ಅಘಾಡಿ ಸರ್ಕಾರ ರಚನೆಗೆ ಶಕ್ತಿ ಮೀರಿ ಪ್ರಯತ್ನಿಸಲಾಗ್ತಿದೆ.

ಕಳೆದ ನಾಲ್ಕು ದಿನಗಳಿಂದ ಕೇರಳ ಹಾಗು ಮಹಾರಾಷ್ಟ್ರದಲ್ಲಿ ಬೀಡು ಬಿಟ್ಟಿರುವ ಸಚಿವ ಕೆ.ಜೆ ಜಾರ್ಜ್​, ಮೊದಲಿಗೆ ವಯನಾಡಿನಲ್ಲಿ ಕ್ರೈಸ್ತ ಸಮುದಾಯದ ಮುಖ್ಯಸ್ಥರ ಜೊತೆಗೆ ಚರ್ಚೆ ನಡೆಸಿದರು. ಪ್ರಿಯಾಂಕಾ ವಾದ್ರಾ ಗೆಲುವಿಗೆ ನೆರವಾಗುವಂತೆ ಮನವಿ ಮಾಡಿದ್ದರು. ಆ ಬಳಿಕ ಮಹಾರಾಷ್ಟ್ರದ ಪುಣೆಗೆ ತೆರಳಿದ್ದು, ಅಲ್ಫೊನ್ಸೋ ಚರ್ಚ್​ನಲ್ಲಿ ಸಮುದಾಯದ ನಾಯಕರು ಹಾಗು ಜನರ ಜೊತೆಗೆ ಸಂವಾದ ನಡೆಸಿದ್ದಾರೆ. ಕಾಂಗ್ರೆಸ್​ ನೇತೃತ್ವದ ಸರ್ಕಾರ ರಾಜ್ಯಕ್ಕೆ ಯಾಕೆ ಬೇಕು ಅನ್ನೋ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಪುಣೆಯಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ಸಮುದಾಯದ ಮುಖಂಡರು ಹಾಗು ಕೈಗಾರಿಕೋದ್ಯಮಿಗಳ ಜೊತೆಗೆ ಸಭೆ ನಡೆಸಿದ ಸಚಿವ ಕೆ.ಜೆ ಜಾರ್ಜ್​, ಆರ್ಥಿಕ ಸದೃಢತೆ, ಸಮಗ್ರ ಅಭಿವೃದ್ಧಿ, ಸಮುದಾಯ ಕಲ್ಯಾಣಕ್ಕೆ ಸಹಕಾರಿ ಪ್ರಯತ್ನಗಳ ಬಗ್ಗೆ ಚರ್ಚೆ ನಡೆಸಿದರು. ಆ ಬಳಿ ರಸ್ತಾಪೇಠದಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ರು. ಕೆಲಕಾಲ ಭಕ್ತರೊಂದಿಗೆ ಅಲ್ಲಿನ ಸ್ಥಳೀಯ ವಿಚಾರಗಳನ್ನು ಚರ್ಚಿಸಿದರು. ಪುಣೆಯಲ್ಲಿರುವ ಕಾಂಗ್ರೆಸ್​​ ಭವನಕ್ಕೂ ಭೇಟಿ ನೀಡಿದ್ದ ಸಚಿವರು, ಪಿಸಿಸಿ ಹಾಗು ಡಿಸಿಸಿ ಪದಾಧಿಕಾರಿಗಳನ್ನು ಭೇಟಿ ಮಾಡಿ, ಮುಂಬರುವ ಚುನಾವಣೆಯಲ್ಲಿ ಶಕ್ತಿ ಮೀರಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು.

ಪಿ.ಸಿ ಚಾಕೋ ಜೊತೆಗೂಡಿ ಪುಣೆ ಭಾಗದಲ್ಲಿ ಕ್ರೈಸ್ತ ಸಮುದಾಯದ ಮತಗಳನ್ನು ಸೆಳೆಯುವ ಕೆಲಸ ಮಾಡುತ್ತಿದ್ದು, ನವೆಂಬರ್​ 20ರಂದು ನಡೆಯುವ ಮತದಾನದಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಗೆಲುವು ಸಾಧಿಸುವುದಕ್ಕೆ ಬೇಕಾದ ಕಾರ್ಯತಂತ್ರ ಮಾಡುತ್ತಿದ್ದಾರೆ. ರಾಜ್ಯದಿಂದ ಬಹುತೇಕ ಸಚಿವರು ಹಾಗು ನಾಯಕರನ್ನು ವಿಭಾಗವಾರು ಹಂಚಿಕೆ ಮಾಡಿರುವ ಎಐಸಿಸಿ ನಾಯಕರು, ಸ್ಥಳೀಯ ಭಾಷೆ, ಧರ್ಮ, ಜಾತಿ ಆಧಾರಿತವಾಗಿ ಮತಗಳನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿ ವರ್ಸಸ್​ ಮಹಾ ವಿಕಾಸ್​ ಅಘಾಡಿ ಒಕ್ಕೂಟದಲ್ಲಿ ಈ ಬಾರಿ ಯಾರು ಮರಾಠಿಗರ ಮನ ಗೆಲ್ಲುತ್ತಾರೆ ಎನ್ನುವುದನ್ನು ಕಾದು ನೋಡ್ಬೇಕಿದೆ.

Nikhil Kumaraswamy: ಕಾರ್ಯಕರ್ತರ ಮನೆಭೇಟಿಗೆ ಕೊಟ್ಟ ನಿಖಿಲ್‌ ಕುಮಾರಸ್ವಾಮಿ..! #jds #hdkumaraswamy
Tags: BJPCongress PartyKeralaKJ GeorgeMaharastraMallikarjun KhargePriyanka GandhiPune ElectionRahul GandhiSoniya GandhiVynaduಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್|: ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Next Post

ಚನ್ನಪಟ್ಟಣದಲ್ಲಿ ಅಭಿವೃದ್ಧಿಗೆ ಗೆಲುವು ಕೊಡ್ತಾರೆ, ಗೌಡ್ರ ಕುಟುಂಬಕ್ಕೆ ಟಾಂಗ್‌

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

ಚನ್ನಪಟ್ಟಣದಲ್ಲಿ ಅಭಿವೃದ್ಧಿಗೆ ಗೆಲುವು ಕೊಡ್ತಾರೆ, ಗೌಡ್ರ ಕುಟುಂಬಕ್ಕೆ ಟಾಂಗ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada