
ದೆಹಲಿ:ಆಮ್ ಆದ್ಮಿ ಪಕ್ಷದ (AAP) ನಾಯಕಿ ಅತಿಶಿ ಮರ್ಲೆನಾ ( Atishi Marlena) ಅವರು ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ (Delhi CM) ಇಂದು ರಾಜ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಪ್ರಮಾಣವಚನ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ, ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Aarvind Kejriwal) ಅವರ ನಿವಾಸಕ್ಕೆ ತೆರಳಿದ್ದರು.

ದೆಹಲಿ ಕ್ಯಾಬಿನೆಟ್ನಲ್ಲಿ ಏಕೈಕ ಮಹಿಳಾ ಸಚಿವೆಯಾಗಿದ್ದ ಇವರನ್ನು ಸೆಪ್ಟೆಂಬರ್ 17 ರಂದು ಶಾಸಕಾಂಗ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದರು.

ಆಪಾದಿತ ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಧ್ಯ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಅತಿಶಿ ಮುಂದುವರೆಯಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅತಿಶಿ ಅವರಿಗೆ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಬೋಧಿಸಿದರು.
ಅತಿಶಿ ಜೊತೆ ಐವರು ಸಚಿವರು ಪ್ರಮಾಣವಚನ.
ಎಎಪಿ ಘೋಷಿಸಿದ ಹೊಸ ಸಚಿವ ಸಂಪುಟದಲ್ಲಿ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಇಮ್ರಾನ್ ಹುಸೇನ್ ಮತ್ತು ಸುಲ್ತಾನ್ಪುರ ಮಜ್ರಾದಿಂದ ಮೊದಲ ಬಾರಿಗೆ ಶಾಸಕರಾಗಿರುವ ಮುಖೇಶ್ ಅಹ್ಲಾವತ್ ಸೇರಿದ್ದಾರೆ.ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ & ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆ ಬಳಿಕ ಅತಿಶಿ ಅವರೇ ನೂತನ ಸಿಎಂ ಎಂದು ಘೋಷಣೆ ಮಾಡಿದ್ದರು. ಅದರಂತೆಯೇ ಇಂದು ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗೆಯೇ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ಸಹ ಅಂಗೀಕರಿಸಲಾಗಿದೆ ಎಂದು ತಿಳಿದುಬಂದಿದೆ.
ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ವಿಶೇಷ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್ ಕಾಂಗ್ರೆಸ್ನ ಶೀಲಾ ದೀಕ್ಷಿತ್ ದೆಹಲಿಯ ಮಹಿಳಾ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಅತಿಶಿ ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಗೂ ಕೂಡ ಪಾತ್ರರಾಗಿದ್ದಾರೆ.