• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆತ್ಮನಿರ್ಭರ್ ಭಾರತ, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕೆಗಳಿಗೆ ಸಂಜೀವಿನಿ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ: ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
August 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ADVERTISEMENT

ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL)ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳು ಮತ್ತು ಕಾರ್ಮಿಕರ ಜತೆ ಸಂವಾದ ನಡೆಸುತ್ತಾ ಸಚಿವರು ಮಾತನಾಡಿದರು.

ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿಗಳು ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಅವರನ್ನು ನಾವು ನಿಕಟವಾಗಿ ಹಿಂಬಾಲಿಸುತ್ತಿದ್ದೇವೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ನಿರಂತರವಾಗಿ ಚರ್ಚೆಗಳನ್ನು ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.

BHEL ಗೆ ಮತ್ತಷ್ಟು ಶಕ್ತಿ:

ಪ್ರಧಾನಿಗಳ ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡಿದ್ದಾರೆ. ಭಾರತವನ್ನು ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಹಾಗೂ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಲು ಕೈಗಾರಿಕಾ ಉತ್ಪನ್ನವನ್ನು ಹೆಚ್ಚಳ ಮಾಡುವುದು ಅವರ ಉದ್ದೇಶವಾಗಿದೆ. ಅದಕ್ಕಾಗಿ ಅವರ ಕನಸಿನ ಮೆಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳು ಹೆಚ್ಚು ಪರಿಣಾಮಕಾರಿ ಆಗಿವೆ. ಇದೇ ಪರಿಕಲ್ಪನೆ ಅಡಿಯಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಯನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ BHEL ಉತ್ತಮವಾಗಿ ನಡೆಯುತ್ತಿದೆ.ಮೈಸೂರು ಅರಸರು, ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಹಿನ್ನೆಲೆಯಲ್ಲಿ ಇದು ಸ್ಥಾಪನೆಯಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಸಾರ್ವಜನಿಕ ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಇಂಥ ಸವಾಲಿನ ನಡುವೆಯೂ BHEL ಲಾಭದಾಯಕವಾಗಿ ಮುನ್ನಡೆಯುತ್ತಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ಪ್ರಧಾನಿಮಂತ್ರಿಗಳು ಮೆಕ್ ಇಂಡಿಯಾ, ಆತ್ಮ ನಿರ್ಭರ್ ಭಾರತ್ ಪರಿಕಲ್ಪನೆಯ ಅಡಿಯಲ್ಲಿ BHEL ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕ ಆವಿಷ್ಕಾರಗಳ ನಡುವೆ ಕಂಪನಿಯು ವೇಗವಾಗಿ ಮುನ್ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಹೊಸ ಆವಿಷ್ಕಾರ, ತಂತ್ರಜ್ಞಾನ ಅಳವಡಿಕೆಯಲ್ಲಿ ಮೈಮರೆಯುವುದು ಬೇಡ ಎಂದು ಎಚ್ಚರಿಕೆ ನೀಡಿದರು.

ನವದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಈಗಾಗಲೇ ಕಂಪನಿಯ ಆಗುಹೋಗುಗಳ ಬಗ್ಗೆ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಕಂಪನಿ ಉತ್ತಮವಾಗಿ ನಡೆಯುತ್ತಿದೆ. ಒಳ್ಳೆಯ ಆಡಳಿತ, ಉತ್ತಮ ಕಾರ್ಮಿಕ ಶಕ್ತಿ, ತಾಂತ್ರಿಕ ಕುಶಲತೆಯಿಂದ ಉತ್ತಮ ಸ್ಥಿತಿಯಲ್ಲಿ ಇದೆ. ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಇದು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರು ಘಟಕದ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು. ಕಾರ್ಖಾನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾರ್ಮಿಕರ ಜತೆ ಸಂವಾದ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದರು.

Tags: Make in IndiaPM ModiUnion minister HD Kumaraswamy
Previous Post

ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರ..? ಸಿಎಂ ಸಿದ್ದರಾಮಯ್ಯ ಸುಳಿವು..?

Next Post

DYSP ಗಣಪತಿ ಆತ್ಮಹತ್ಯೆ ಪ್ರಕರಣ: ಸುಪ್ರೀಂ ತೀರ್ಪು ಪ್ರಕಟ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
DYSP ಗಣಪತಿ ಆತ್ಮಹತ್ಯೆ ಪ್ರಕರಣ: ಸುಪ್ರೀಂ ತೀರ್ಪು ಪ್ರಕಟ

DYSP ಗಣಪತಿ ಆತ್ಮಹತ್ಯೆ ಪ್ರಕರಣ: ಸುಪ್ರೀಂ ತೀರ್ಪು ಪ್ರಕಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada