ಮೈಸೂರು: ಕ್ಲುಲ್ಲಕ ಕಾರಣಕ್ಕೆ ಕರ್ನಾಟಕದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಶಬರಿಮಲೆ ಸಮೀಪದ ಕಾಲಡಿ ಹೆದ್ದಾರಿಯಲ್ಲಿ ನಡೆದಿದೆ.
ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಭಕ್ತರಿದ್ದ ಟೆಂಪೋ ಟ್ರಾವೆಲರ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾಲ ಚಾಲಕನ ಅಜಾರೂಕತೆಯಿಂದ ಈ ಅಪಘಾತ ಸಂಭವಿಸಿದೆ. ಆದರೆ ಅಪಘಾತಕ್ಕೆ ಕಾರು ಚಾಲಕನ ತಪ್ಪಿದ್ದರೂ ಟೆಂಪೋ ಟ್ರಾವೆಲರ್ ಚಾಲಕನ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಇದನ್ನು ಪ್ರಶ್ನೆ ಮಾಡಿದ ಕರ್ನಾಟಕದ ಅಯ್ಯಪ್ಪ ಭಕ್ತರ ಮೇಲೂ ಸ್ಥಳೀಯರು ಹಲ್ಲೆ ನಡೆಸಿದ್ದಾರೆ.
ಘಟನೆಯಿಂದ ಕಂಗಾಲಾದ ಕರ್ನಾಟಕದ ಅಯ್ಯಪ್ಪ ಭಕ್ತರು ತಮ್ಮ ಮೇಲೆ ಹಲ್ಲೆ ನಡೆದಿದೆ, ಬಂದು ರಕ್ಷಿಸಿ ಎಂದು ಮನವಿ ಮಾಡಿದ್ದಾರೆ. ಈ ನಡುವೆ ವಿಷಯ ತಿಳಿದು ಸ್ಥಳಕ್ಕೆ ಬಂದ ಕೇರಳ ಪೊಲೀಸರು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಅಲ್ಲದೇ ಸಿಸಿಟಿವಿ ದೃಶ್ಯ ಪರಿಶೀಲಿಸಿದ ಬಳಿಕ ಪೊಲೀಸರು ಹಲ್ಲೆ ನಡೆಸಿದವರಿಂದ ಕರ್ನಾಟಕದ ಅಯ್ಯಪ್ಪ ಭಕ್ತರಿಗೆ ಕ್ಷಮೆ ಕೇಳಿದ್ದಾರೆ. ಈ ಎಲ್ಲಾ ಭಕ್ತರು
ಮೈಸೂರಿನಿಂದ ಶಬರಿಮಲೆಗೆ ತೆರಳಿದ್ದರು, ಘಟನೆ ಬಳಿಕ
ಮತ್ತೆ ಶಬರಿಮಲೆಗೆ ತೆರಳಿದ್ದಾರೆ.
 
			
 
                                 
                                 
                                