ಲಂಡನ್: ಲಂಡನ್ ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿ (Indian High Commission) ಮೇಲೆ ಕಳೆದ ವರ್ಷ ದಾಳಿ ನಡೆಸಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಯುನೈಟೆಡ್ ಕಿಂಗ್‌ಡಮ್‌ನ ಹೌನ್ಸ್ಲೋ ನಿವಾಸಿ, ಖಲಿಸ್ತಾನಿ ಪ್ರತ್ಯೇಕತಾವಾದಿ(Pro-Khalistani) ಇಂದರ್‌ಪಾಲ್ ಸಿಂಗ್ ಗಾಬಾ ಎಂಬಾತನೇ ಬಂಧಿತ ಆರೋಪಿ. 2023ರ ಪ್ರತಿಭಟನೆಯ ಸಮಯದಲ್ಲಿ ಕಾನೂನುಬಾಹಿರ ಚಟುವಟಿಕೆ ಆರೋಪದಡಿ ಆತನನ್ನು ಬಂಧಿಸಲಾಗಿದೆ. ಈ ಘಟನೆ ಕಳೆದ ವಾರ್ಷ ಮಾರ್ಚ್ 18ರಂದು ನಡೆದಿತ್ತು.

ಖಲಿಸ್ತಾನಿ ಪರ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ತೆಗೆದುಕೊಂಡ ಕ್ರಮಕ್ಕೆ ಪ್ರತೀಕಾರವಾಗಿ ಹೈಕಮಿಷನ್ ಮೇಲಿನ ದಾಳಿ ನಡೆದಿತ್ತು. ಖಲಿಸ್ತಾನ್ ಸಹಾನುಭೂತಿಗಳು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರು ಕಟ್ಟಡದ ಮೊದಲ ಮಹಡಿಯ ಬಾಲ್ಕನಿಯಿಂದ ಭಾರತೀಯ ಧ್ವಜವನ್ನು ಕೆಳಗಿಳಿಸಿ, ಖಲಿಸ್ತಾನಿ ಧ್ವಜ ಹಾರಿಸಿದ್ದರು. ಭಾರತೀಯ ಧ್ವಜ ಅಪವಿತ್ರಗೊಳಿಸಿದ್ದನ್ನು ಖಂಡಿಸಿ, ಹೈಕಮಿಷನ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು.