ಬೆಂಗಳೂರು : ನಗರದ ಮಾರುಕಟ್ಟೆಯೊಂದರಲ್ಲಿ ವಿದೇಶಿ ವ್ಲಾಗರ್ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ವಿಚಾರವಾಗಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಸ್ಪಷ್ಟನೆ ನೀಡಿದ್ದಾರೆ.
It's a old video which has come into circulation now. The person harassing in the video has been identified traced and action taken. No scope for such highhandedness in Naamma Bengaluru against anybody. https://t.co/gx4dYPZUwe
— B. Dayananda, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) June 12, 2023
ಇದೊಂದು ಹಳೆಯ ವಿಡಿಯೋವಾಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿದೇಶಿಗನ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಯನ್ನು ಪತ್ತೆ ಮಾಡಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಮ್ಮ ಬೆಂಗಳೂರಿನಲ್ಲಿ ಇಂತಹ ಕೃತ್ಯಗಳು ನಡೆಯುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಅನ್ಶಲ್ ಸಕ್ಸೇನಾ ಈ ವಿಡಿಯೋ ಶೇರ್ ಮಾಡಿದ್ದು , ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿದ್ದರು. ಬೆಂಗಳೂರಿನ ಮಾರ್ಕೆಟ್ವೊಂದರಲ್ಲಿ ವ್ಲಾಗರ್ನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ, ಆತ ವಿಡಿಯೋದಲ್ಲಿ ಓರ್ವ ವ್ಯಕ್ತಿ ನನ್ನ ಕೈ ಹಾಗೂ ತೋಳನ್ನು ಹಿಡಿದು ನನ್ನ ಮೇಲೆ ದಾಳಿ ಮಾಡಿದ್ದಾನೆ, ನಾನು ತಪ್ಪಿಸಿಕೊಳ್ಳಲು ಯತ್ನಿಸಿದಾಗಲೂ ನನ್ನನ್ನು ಬೆನ್ನಟ್ಟಿ ಬಂದಿದ್ದಾನೆ ಎಂದು ಹೇಳಿಕೊಂಡಿದ್ದಾನೆ ಎಂದು ಬರೆದಿದ್ದರು.