ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದರು.
ಮಂಗಳೂರು:ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದರು.
ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ ಪಿಎ ಎಂದು ಸಂದೇಶ ಬರೆಯಲಾಗಿತ್ತು. ಈ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ .ಕೆ.ಸಿ. ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರು ಕಾಲರ್ ಮೂಲಕ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.
ಯು.ಟಿ.ಖಾದರ್ ಅವರು ವಿಷಯ ಗೊತ್ತಾದ ತಕ್ಷಣ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ನೀಡಿದ್ದಾರೆ.