ಮಂಗಳೂರು(ದಕ್ಷಿಣ ಕನ್ನಡ): ಮುಖ್ಯಮಂತ್ರಿ ಸಿದ್ಧರಾಮಯ್ಯ (siddaramaiah) ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಏರ್ ಪೋರ್ಟ್ ನಿಂದ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದ ಸಹ್ಯಾದ್ರಿ ಮೈದಾನಕ್ಕೆ ತೆರಳುತ್ತಿದ್ದ ವೇಳೆ ಕಾರಿಗೆ ಅಡ್ಡಹಾಕಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

50ಕ್ಕೂ ಹೆಚ್ಚು ಕಾರ್ಯಕರ್ತರು ಮುಖ್ಯಮಂತ್ರಿ ಅವರು ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಪೊಲೀಸರು ಕಾರ್ಯಕರ್ತರಿಗೆ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ. ಆದರೆ ಕಾರ್ಯಕರ್ತರು ತಮ್ಮ ಪಟ್ಟು ಬಿಟ್ಟಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಕೂಡ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.
ಈ ವೇಳೆ ಕಾರ್ಯಕರ್ತರು ಹಾಗೂ ಕಮಿಷನರ ನಡುವೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ವಿರುದ್ದ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
#karnataka #mangaluru #siddaramaiah #congress #bjp #bjpworkers #protest #police