ಬೆಂಗಳೂರು : ರಾಜ್ಯದ ಪಡಿತರ ಚೀಟಿ (Ration card) ಫಲಾನುಭವಿಗಳು ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಹಾರ ಇಲಾಖೆಯು ನೀಡಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಿದೆ.
ಆಹಾರ ಇಲಾಖೆಯ ನಿಯಮಾವಳಿಗಳ ಪ್ರಕಾರ, ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು, ಇದುವರೆಗೆ ಒಮ್ಮೆಯೂ ಇ-ಕೆವೈಸಿ ಮಾಡಿಸದ 3.82 ಲಕ್ಷಕ್ಕೂ ಅಧಿಕ ಮಂದಿ ಹಾಗೂ 5 ವರ್ಷಕ್ಕಿಂತ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 54.27 ಲಕ್ಷಕ್ಕೂ ಅಧಿಕ ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ನವೀಕರಿಸಿ ದೃಢೀಕರಿಸಬೇಕಿದೆ.
ಫಲಾನುಭವಿಗಳು ‘ಅನ್ನಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ‘ಆಹಾರ’ ತಂತ್ರಾಂಶದ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು. ನಿಗದಿತ ದಿನಾಂಕದೊಳಗೆ ಪ್ರಕ್ರಿಯೆ ಮುಗಿಸದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಉದ್ಯೋಗ ಅಥವಾ ಇತರೆ ಕಾರಣಗಳಿಗಾಗಿ ಹೊರ ರಾಜ್ಯಗಳಿಗೆ ತೆರಳಿರುವ ರಾಜ್ಯದ ಪಡಿತರ ಚೀಟಿದಾರರ ಅನುಕೂಲಕ್ಕಾಗಿ ‘ಅನ್ನಸೇವೆ’ ಆ್ಯಪ್ ಲಭ್ಯತೆಯನ್ನು ದೇಶಾದ್ಯಂತ ವಿಸ್ತರಿಸಲಾಗಿದೆ. ಹೊರ ರಾಜ್ಯಗಳಲ್ಲಿ ನೆಲೆಸಿರುವ ಫಲಾನುಭವಿಗಳು ಗೂಗಲ್ ಪ್ಲೇ ಸ್ಟೋರ್‌ನಿಂದ ಆ್ಯಪ್ ಡೌನ್‌ಲೋಡ್ ಅಥವಾ ಅಪ್ಡೇಟ್ ಮಾಡಿಕೊಂಡು ತಮ್ಮ ಮೊಬೈಲ್ ಮೂಲಕವೇ ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಮನವಿ ಮಾಡಿದೆ.
ಅರ್ಕೇಶ್ವರ ದೇಗುಲದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ: ಚಿತ್ರ ಬಿಡಿಸಲು ಸೂಚನೆ ಕೊಟ್ಟವರಾರು?






