• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಚಾಲನೆ: ಏನಿದರ ವಿಶೇಷತೆ..?

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ಕರ್ನಾಟಕ, ರಾಜಕೀಯ
0
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಚಾಲನೆ: ಏನಿದರ ವಿಶೇಷತೆ..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು, ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು ಎಂದರು.‌

ಸಚಿವ ಎಂ.ಬಿ ಪಾಟೀಲ್‌ ಮಾತನಾಡಿ, ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ ಎಂದರು.

ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಹೇಳಿದರು.

ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Parameshwar on Parappana Agrahara: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಪರಮೇಶ್ವರ್ ಹೇಳಿದ್ದೇನು?
Tags: Bengaluru AirportCM SiddaramaiahDK ShivakumarKalaloka storeKarnatakaMB Patil
Previous Post

ಬಿಡುಗಡೆಗೂ ಮುನ್ನವೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರ

Next Post

ವೃದ್ದಾಶ್ರಮ ಹೆಸರಲ್ಲಿ 1.29 ಕೋಟಿ ರೂ. ವಂಚನೆ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ವೃದ್ದಾಶ್ರಮ ಹೆಸರಲ್ಲಿ 1.29 ಕೋಟಿ ರೂ. ವಂಚನೆ

ವೃದ್ದಾಶ್ರಮ ಹೆಸರಲ್ಲಿ 1.29 ಕೋಟಿ ರೂ. ವಂಚನೆ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada