ತುಳಸಿ ದಳ ಚಿತ್ರದ ಮೂಲಕ ಸಿನಿರಸಿಕರ ಗಮನ ಸೆಳೆದಿದ್ದ ವೇಮಗಲ್ ಜಗನ್ನಾಥ್ ರಾವ್ ಇದೀಗ ಆವರ್ತ ಎಂಬ ಹೊಸ ಸಿನಿಮಾವನ್ನ ನಿರ್ಧೇಶಿಸಿದ್ದಾರೆ.
ಇತ್ತೀಚಿಗೆ ಚಿತ್ರದ ಧ್ವನಿಸುರಳಿಯನ್ನು ರಾಷ್ಟ್ರ ಪ್ರಶಸ್ತಿ ವಿಜೇತೆ, ಮಾಜಿ ವಿಧಾನಪರಿಷತ್ ಸದಸ್ಯೆ ನಟಿ ತಾರಾ ಅನುರಾಧ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಟಿ ತಾರಾ ಮಾತನಾಡಿ ನನ್ನ ಮೊದಲ ಚಿತ್ರ “ತುಳಸಿದಳ”. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದಿದ್ದಾರೆ.

ನಿರ್ದೇಶಕ ವೇಮಗಲ್ ಜಗನ್ನಾಥರಾವ್ ಮಾತನಾಡಿ ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ನಮ್ಮ ಚಿತ್ರದ ಕಥೆ ಎಂದು ಹೇಳಿದ್ದಾರೆ.
ಚಿತ್ರಕ್ಕೆ ವೇಮಗಲ್ ಜಗನ್ನಾಥ್ ರಾವ್ ಆಕ್ಷನ್ ಕಟ್ ಹೇಳಿದ್ದು ಥ್ರಿಲರ್ ಮಂಜು ಸಾಹಸ ಸನ್ನಿಔಏಶಗಳನ್ನು ಸಂಯೋಜಿಸಿದ್ದಾರೆ. ಅತಿಶಯ್ ಜೈನ್ ಸಂಗೀತ ನೀಡಿದ್ದು ಮಲ್ಲಿಕಾರ್ಜುನ್ ಛಾಯಾಗ್ರಹಣ ಚಿತ್ರಕ್ಕಿದೆ.






