• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
June 12, 2025
in ಅಂಕಣ, ಇದೀಗ, ಕರ್ನಾಟಕ, ಕ್ರೀಡೆ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.
ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿ
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ ದಿಟ್ಟ ಹೆಜ್ಜೆ

ADVERTISEMENT

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಅರಿವು ಮನೆಗಳಿಂದಲೇ ಆರಂಭವಾಗಬೇಕು. ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಮಹಾತ್ಮ ಗಾಂಧಿ ಉದ್ಯಾನದಿಂದ ಕೆ ಆರ್‌ ವೃತ್ತದವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರಾಗುವುದನ್ನು ತಡೆಯಲು ಕಾರ್ಮಿಕ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಸರ್ಕಾರದೊಂದಿಗೆ ಜನರೂ ಕೈ ಜೋಡಿಸಿದರೆ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬಹುದು ಎಂದರು.

ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ. ಯಾರೇ ಇದನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಪೋಷಕರಿಗೂ ಶಿಕ್ಷೆ ಆಗಲಿದೆ. ಇದರ ಮೂಲಕ ಭಯ ಮೂಡಿಸುವುದು ಇಲಾಖೆಯ ಉದ್ದೇಶವಲ್ಲ. ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಸಾಮಾಜಿಕ ವ್ಯವಸ್ಥೆಯಡಿ ಅರಿವು ಮೂಡಿಸಬೇಕು ಎಂದು ವಿವರಿಸಿದರು.

ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜಿಲ್ಲಾಧಿಕಾರಿ, ಎಸ್‌ ಪಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಸಭೆ ಮಾಡಿ ಮಕ್ಕಳು ಕಾರ್ಮಿಕರಾಗುವುದನ್ನು ತಡೆಯಲು ಕ್ರಮ ಕೈಗೊಂಡಿದ್ದೇವೆ. ಡಿಸಿ, ಸಿಇಒ, ಎಸ್ಪಿಗಳು ಮುತುವರ್ಜಿ ವಹಿಸಿದರೆ ನಿರ್ಮೂಲನೆ ಸುಲಭವಾಗಲಿದೆ.
ವರ್ಷಕ್ಕೆ ಒಂದು ಬಾರಿ ದಿನಾಚರಣೆ ಮಾಡಿದರೆ ಸಾಲದು. ಎರಡು ತಿಂಗಳಿಗೆ ಒಂದು ಬಾರಿ ಈ ಸಂಬಂಧ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

ಹೈವೆ ಬದಿಗಳಲ್ಲಿನ ಡಾಬಾ, ಹೋಟೆಲ್‌, ಗ್ಯಾರೇಜ್‌, ಸಣ್ಣ ಸಣ್ಣ ಮೆಕ್ಯಾನಿಕ್‌ ಶಾಪ್‌ಗಳಲ್ಲಿ ಮಕ್ಕಳು ಕೆಲಸ ಮಾಡುತ್ತಾರೆ. ಅವರು ಕೆಲಸ ಬಿಟ್ಟು ಶಾಲೆಗಳಿಗೆ ಹೋಗುವಂತಾಗಬೇಕು. ಬಾಲ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಡಿದ್ದು ಯಾರದೇ ಗಮನಕ್ಕೆ ಬಂದರೆ ಕೂಡಲೇ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. ಸರ್ಕಾರದೊಂದಿಗೆ ಕೈ ಜೋಡಿಸಿ ನಾವು ನೀವೆಲ್ಲ ಸೇರಿ ಈ ಪದ್ಧತಿಯನ್ನು ತೊಲಗಿಸೋಣ ಎಂದು ಕರೆ ನೀಡಿದರು.

ಸರ್ಕಾರೇತರ ಸಂಸ್ಥೆಗಳನ್ನು ಸೇರಿಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಚಟುವಟಿಕೆ ಹೆಚ್ಚಿಸಬೇಕು. ಮಕ್ಕಳಿಗೆ ಕಲಿಕೆ ಮೊದಲಾಗಬೇಕು. ಕೆಲಸ ಅಲ್ಲ. ಆಟವಾಡುವ ವಯಸ್ಸಲ್ಲಿ ಮಕ್ಕಳು ಕೆಲಸ ಮಾಡಬಾರದು. ಈ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಸೇರಿ ಒಂದಾಗೋಣ. ನಾವು ನೀವು ಸೇರಿ ಒಳ್ಳೆ ಕೆಲಸ ಮಾಡೋಣ ಎಂದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಮಾತನಾಡಿ,” ಬಾಲ ಕಾರ್ಮಿಕರಾಗದಂತೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ. ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ. ಬಡತನಕ್ಕೂ ಬಾಲಕಾರ್ಮಿಕ ಪದ್ಧತಿಗೂ ನಂಟಿದೆ ಎನ್ನಲಾಗುತ್ತದೆ. ಅದು ಹೌದು. ಆದರೆ ಅದನ್ನು ಹೋಗಲಾಡಿಸಬಹುದು ಎಂದರು.

ಮಕ್ಕಳನ್ನು ಓದಿಸಲಾಗದ ಪರಿಸ್ಥಿತಿಯಲ್ಲಿ ಎಷ್ಟೋ ಪೋಷಕರು ಇದ್ದಾರೆ. ಅಂತಹವರಿಗೊಂದು ನಾವು ಸಣ್ಣ ಸಹಾಯ ಮಾಡಿದರೆ ಎಷ್ಟೋ ಮಕ್ಕಳು ಬಾಲ ಕಾರ್ಮಿಕರಾಗುವುದು ತಪ್ಪಲಿದೆ. ಒಳ್ಳೆಯ ಶಿಕ್ಷಣ ಸಿಕ್ಕರೆ ಮಕ್ಕಳು ಉತ್ತಮ ಪ್ರಜೆ ಆಗುತ್ತಾರೆ. ನಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡು ಬಂದರೆ ನಮ್ಮ ಜವಾಬ್ದಾರಿ ನಿರ್ವಹಿಸೋಣ ಎಂದರು.

ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ಸ್ವೀಕರಿಸಲಾಯಿತು.

ಜಾಥಾದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಜಿ ಜಗದೀಶ, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್‌, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ ಮಕ್ಕಳು ಭಾಗವಹಿಸಿದ್ದರು.

Tags: Bharathi DChild LaboursG JagadhishHN GopalkrishnaKarnatakaLabour MInisterLabour OfficersN V Prasadravikumarsanthosh ladSanthosh lad foundation
Previous Post

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

Next Post

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
0

ಬಹುಭಾಷಿಕ ದೇಶದಲ್ಲಿ ಭಾಷಾ ಸ್ವಾಯತ್ತತೆಯೊಂದೇ ಸಮನ್ವಯ ಸಾಧಿಸಬಲ್ಲದು ಭಾಗ 2   ಶಾಲಾ ಕಲಿಕೆಯಲ್ಲಿ ಭಾಷಾ ಅಸ್ಮಿತೆ  ಶಾಲಾ ‍ಪಠ್ಯಕ್ರಮದಲ್ಲಿ ಭಾಷಾ ಅಳವಡಿಕೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ...

Read moreDetails

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

July 11, 2025

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

July 11, 2025
Next Post

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada