ಬೆಳಗಾವಿ: ಪೊಲೀಸರಿಗೆ ಅವಾಜ್ ಹಾಕಿದ ಕಾರಣಕ್ಕೆ ಕಾಂಗ್ರೆಸ್ ಮುಖಂಸ ನಲಪಾಡ್ ಹಾಗೂ ಇನ್ನಿತರ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಬೆಳಗಾವಿಯಲ್ಲಿ ಸೋಮವಾರ ಯುಥ್ ಕಾಂಗ್ರೆಸ್ ವತಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಪ್ರತಿಭಟನ ಹಮ್ಮಿಕೊಳ್ಳಲಾಗಿತ್ತು. ಅದರಂತೆ ನಲಪಾಡ್ ಹಾಗೂ ಇನ್ನಿತರ ಕಾರ್ಯಕರ್ತರು, ಯಡಿಯೂರಪ್ಪ ಮಾರ್ಗದಿಂದ ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದರು. ಆದರೆ ಈ ವೇಳೆ ಅಲಾರವಾಡ ಕ್ರಾಸ್ ಬಳಿ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ಈ ಸಂದರ್ಭದಲ್ಲಿ ನಲಪಾಡ್ ಕರ್ತವ್ಯನಿರತ ಪೊಲೀಸರ ಮೇಲೆ ಕೂಗಾಡಿ, ಏರು ಧ್ವನಿಯಲ್ಲಿ ಅವಾಜ್ ಹಾಕಿದರು. ಈ ಹಿನ್ನೆಲೆಯಲ್ಲಿ ನಲಪಾಡ ಜೊತೆಗೆ ನೂರಾರು ಕಾರ್ಯಕರ್ತರು ವಶಕ್ಕೆ ಪಡೆದರು. ನಲಪಾಡ್ ಅವರಿಗೆ ಮೃಣಾಲ್ ಹೆಬ್ಬಾಳ್ಕರ್, ರಾಹುಲ್ ಜಾರಕಿಹೊಳಿ ಸೇರಿದಂತೆ ಹಲವು ಕಾರ್ಯಕರ್ತರು ಸಾಥ್ ನೀಡಿದರು.