ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಪಟ್ಟಿ ಬಿಡುಗಡೆ ಮಾಡಿದೆ.
ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಎರಡು ವರ್ಷಗಳು ಕಳೆದ ನಂತರ ಪ್ರಧಿಕಾರ ಈ ಪಟ್ಟಿ ಬಿಡುಗಡೆ ಮಾಡಿದೆ. ಇದಲ್ಲದೇ ಅಕ್ರಮ ನಿವೇಶನಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಾಧಿಕಾರ ಆರೋಪಿಸಿದೆ.
ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ 40 ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಸ್ಥಳೀಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ, ಪಕ್ಷದ ಮಾಜಿ ಶಾಸಕ ಗೋರಖನಾಥ್ ಮತ್ತು ಮೇಯರ್ ರಿಷಿಕೇಶ್ ಉಪಾಧ್ಯಾಯ ಅವರ ಹೆಸರುಗಳಿವೆ.ನ ಆದರೆ ಮೇಯರ್ ರಿಷಿಕೇಶ್ ಉಪಾಧ್ಯಾಯ ಮತ್ತು ಶಾಸಕ ವೇದ್ ಪ್ರಕಾಶ್ ಗುಪ್ತಾ ಅವರು ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಪ್ರಾಧಿಕಾರವು ಬಿಡುಗಡೆ ಮಾಡಿದ ಆಪಾದಿತ ಆರೋಪಿಗಳ ಪಟ್ಟಿಯಲ್ಲಿ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಪ್ರತಿಸ್ಪರ್ಧಿ ಪಕ್ಷಗಳು ಅಯೋಧ್ಯೆಯಲ್ಲಿ ಅಕ್ರಮ ಭೂಮಿ ಖರೀದಿ ಮತ್ತು ಮಾರಾಟದ ವಿಷಯವನ್ನು ಹೆಚ್ಚು ಚರ್ಚೆಗೆ ತಂದಿದ್ದವು. ಚುನಾವಣೆ ನಡೆದು ಒಂದು ವರ್ಷಗಳ ನಂತರ ಪ್ರಾಧಿಕಾರ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ.