ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
ವಿಜಯ್ ಗುರೂಜಿ & ಸಹಚರರು ರಸ್ತೆ ಬದಿ ಟೆಂಟ್ ರಸ್ತೆಹಾಕಿಕೊಂಡು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಜಾಹೀರಾತು ಹಾಕಿ, ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಟೆಕ್ಕಿಯೊಬ್ಬ ಲೈಂಗಿಕ ಸಮಸ್ಯೆಗೆ ಕೆಂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದಾಗ, ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಟೆಂಟ್ ಒಂದರಲ್ಲಿ `ಲೈಂಗಿಕ ಸಮಸ್ಯೆಗೆ ಆಯುರ್ವೇದಿಕ್ ಚಿಕಿತ್ಸೆ’ ಎಂಬ ಜಾಹೀರಾತನ್ನು ಗಮನಿಸಿದ್ದಾರೆ. ಬಳಿಕ ಟೆಂಟ್‌ನಲ್ಲಿದ್ದ ವಿಜಯ್ ಗುರೂಜಿಯನ್ನು ಸಂಪರ್ಕಿಸಿದ್ದಾರೆ.
ತನ್ನ ಬಳಿ ಬಂದ ಟೆಕ್ಕಿಗೆ ಗುರೂಜಿ “ದೇವರಾಜ್ ಬೂಟಿ” ಎಂಬ ಔಷಧಿಯನ್ನು ಖರೀದಿಸಲು ಸೂಚಿಸಿದ್ದಾನೆ. ಒಂದು ಗ್ರಾಂ. ಔಷಧಿಗೆ 1.5 ಲಕ್ಷ ರೂ. ಎಂದು ಹೇಳಿದ್ದ ಗುರೂಜಿ, ಅದರಂತೆ ಟೆಕ್ಕಿಯಿಂದ 1,60,000 ರೂ. ಪಡೆದುಕೊಂಡಿದ್ದಾನೆ. ಈ ಔಷಧಿಗೆ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸಬಾರದು ಮತ್ತು ಒಬ್ಬರೇ ಬಂದು ತೆಗೆದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಿದ್ದ. ಅದರಂತೆ ಟೆಕ್ಕಿ ಕೂಡ ಗುರೂಜಿಯ ಮಾತನ್ನು ನಂಬಿ ಹಣ ನೀಡಿದ್ದಾರೆ.
ಇದಾದ ಬಳಿಕ “ಭವನ ಬೂಟಿ ತೈಲ” ಹೆಸರಿನಲ್ಲಿ ದುಬಾರಿ ಔಷಧಿಗಳನ್ನು ಟೆಕ್ಕಿ ಖರೀದಿ ಮಾಡಿದ್ದ. ಇದೇ ರೀತಿ ಹಂತಹಂತವಾಗಿ ತಮ್ಮ ಲೈಂಗಿಕ ಸಮಸ್ಯೆ ಪರಿಹಾರವಾಗುತ್ತದೆ ಎಂಬ ನಂಬಿಕೆಯಿಂದ ಬರೋಬ್ಬರಿ 48 ಲಕ್ಷ ರೂ. ಹಣವನ್ನು ಗುರೂಜಿಗೆ ನೀಡಿದ್ದಾರೆ. ಇಷ್ಟೆಲ್ಲಾ ದುಬಾರಿ ಔಷಧಿಗಳನ್ನು ಸೇವಿಸಿದರೂ ಟೆಕ್ಕಿಯ ಲೈಂಗಿಕ ಸಮಸ್ಯೆ ಪರಿಹಾರವಾಗಿಲ್ಲ. ಬದಲಿಗೆ, ಮತ್ತೆ ಅದೇ ಸಮಸ್ಯೆ ಶುರುವಾಗಿದೆ. ಚಿಕಿತ್ಸೆ ಗುಣಮುಖವಾಗದ ಬಗ್ಗೆ ಪ್ರಶ್ನಿಸಿದಾಗ, ಗುರೂಜಿ ಸಮಸ್ಯೆ ಹೆಚ್ಚಾಗುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ನಂತರ ತಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಾಗ ರಕ್ತ ಪರೀಕ್ಷೆ ಮಾಡಿಸಿದಾಗ, ಆಯುರ್ವೇದ ಚಿಕಿತ್ಸೆಯಿಂದಾಗಿ ಕಿಡ್ನಿಗೆ ಸಮಸ್ಯೆ ಆಗಿರುವುದು ಪತ್ತೆಯಾಗಿದೆ.
ಕೊನೆಗೆ ಟೆಕ್ಕಿ ಜ್ಞಾನ ಭಾರತಿ ಪೊಲೀಸರಿಗೆ ಘಟನೆ ಬಗ್ಗೆ ದೂರು ನೀಡಿದ್ದ. ತನಿಖೆ ಪ್ರಾರಂಭಿಸಿದ ಪೊಲೀಸರು ಗುಜರಾತ್ ಮೂಲದ ವಿನಯ್ ಮತ್ತು ವಿಜಯ್ ಚಿತ್ತೋಡಿಯಾ ಎಂಬುವರನ್ನು ತೆಲಂಗಾಣ ಮೊಹಬೂಬ್ ನಗರ ಮತ್ತು ಸೈಬರಬಾದ್ ನಲ್ಲಿ ಇಬ್ಬರನ್ನ ಬಂಧಿಸಿದ್ದಾರೆ.
ಇನ್ನು ಆರೋಪಿಗಳು ಬೆಂಗಳೂರು, ತುಮಕೂರು ಸೇರಿ ಒಟ್ಟು ಎಂಟು ಟೆಂಟ್ ಗಳನ್ನು ಹೊಂದಿದ್ದರು. ಈ ಟೆಂಟ್ ಗಳಲ್ಲಿ ಬಹುತೇಕ ಎಲ್ಲಾ ವೈದ್ಯ ಕೀಯ ಸಮಸ್ಯೆಗಳಿಗೆ ಪರಿಹಾರ ಮಾಡ್ತೀನಿ ಎಂದು ಹೇಳಿ ಅನೇಕ ಜನರಿಗರ ವಂಚಿಸಿರೋದು ಬೆಳಕಿಗೆ ಬಂದಿದೆ. ಸದ್ಯ ಬಂಧಿತರಿಂದ 19.50 ಲಕ್ಷ ಹಣವನ್ನು ವಶಕ್ಕೆ ಪಡೆದಿರೋ ಪೊಲೀಸರು ಇಬ್ಬರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿ ತನಿಖೆ ಮುಂದುವರಿಸಿದ್ದಾರೆ






