• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ನಾಗೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ರಾಜಕೀಯ
0
ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ನಾಗೇಂದ್ರ
Share on WhatsAppShare on FacebookShare on Telegram

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ (B Nagendra) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ADVERTISEMENT

ಹಾಲಿ ಸಚಿವರಾಗಿದ್ದ ಪ್ರಭಾವಿ ನಾಯಕ ಶ್ರೀರಾಮುಲು ಅವರನ್ನೇ ಸೋಲಿಸಿ ಮಂತ್ರಿಯಾಗಿದ್ದ ನಾಗೇಂದ್ರ, ಒಂದೇ ವರ್ಷದಲ್ಲಿ ಸಚಿವ ಸ್ಥಾನ ಕಳೆದುಕೊಂಡಂತಾಗಿದೆ. ತಮ್ಮ ರಾಜಕೀಯ ಗುರುವಾಗಿದ್ದ ಶ್ರೀರಾಮುಲು ಅವರನ್ನೇ ಮಣಿಸಿ ನಾಗೇಂದ್ರ ಸಚಿವರಾಗಿದ್ದರು.

ಬಿ. ನಾಗೇಂದ್ರ ಮೂಲತಃ ಬಳ್ಳಾರಿ ಜಿಲ್ಲೆಯವರು. ಬಿ. ಕಾಂ ಪದವಿ ಪಡೆದು ಉದ್ಯಮದ ಕಡೆ ಆಸಕ್ತಿ ವಹಿಸಿ, ಗಣಿಗಾರಿಕೆ ಮಾಡಿದ್ದರು. ಆ ವೇಳೆ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಇವರ ನಡುವೆ ಸ್ನೇಹಾ ಬೆಳೆಯಿತು. ಉದ್ಯಮ ಬೆಳೆದಂತೆ ನಾಗೇಂದ್ರ ಕೂಡ ಬೆಳೆದರು. ನಂತರ 2008 ರಲ್ಲಿ ಜನಾರ್ದನ ಮತ್ತು ಶ್ರೀರಾಮುಲು ಸೇರಿ ಬಿಜೆಪಿಯಿಂದ ಕೂಡ್ಲಿಗಿ ಟಿಕೆಟ್ ಕೊಡಿಸಿ ಅವರನ್ನ ಗೆಲ್ಲಿಸಿದರು. ಅಲ್ಲಿಂದ ರಾಜಕೀಯ ಜೀವನ ಪ್ರಾರಂಭವಾಯಿತು.

2013 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕೂಡ್ಲಿಗಿಯಿಂದ ಸ್ಪರ್ಧೆ ಮಾಡಿ ಆಗಲೂ ಗೆದ್ದರು. ಆನಂತರ ಗಣಿ ಕೇಸ್‌ಗಳ ಮೂಲಕ ಜೈಲುವಾಸ ಅನುಭವಿಸಿದರು. 2018 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಆ ವೇಳೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ನಂತರ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲೂ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿಯ ಶ್ರೀರಾಮುಲು ವಿರುದ್ಧ ಅಭೂತಪೂರ್ವ ಜಯ ಸಾಧಿಸಿದರು. ಹೀಗಾಗಿ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಈಗ ನಿಗಮದ ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದಾರೆ.

Tags: B Nagendraresign
Previous Post

ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ರಾಹುಲ್ ಗೆ ಒತ್ತಡ

Next Post

ಮುಜುಗರ ತಪ್ಪಿಸಲು ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ : ಡಿಸಿಎಂ ಡಿಕೆಶಿ

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ನಾಗೇಂದ್ರ

ಮುಜುಗರ ತಪ್ಪಿಸಲು ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ : ಡಿಸಿಎಂ ಡಿಕೆಶಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!