ಬಹುಭಾಷಾ ನಟಿ ಸರೋಜಾ ದೇವಿಯವರ (B Satish’e devi) ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಿನಲ್ಲಿ ನಡೆಯಲಿದೆ.ರಾಮನಗರ ಜಿಲ್ಲೆಯ (Ramnagar) ದಶವಾರ ಗ್ರಾಮದಲ್ಲಿ ಸರೋಜಾ ದೇವಿಯವರ ಅಂತ್ಯಕ್ರಿಯೆ ನಡೆಯಲಿದೆ. ಅವರ ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 1.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ. ಇದಕ್ಕೂ ಮುನ್ನ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ಅಂತಿಮ ದರ್ಶನ ಪಡೆಯಲಿದ್ದಾರೆ.

ಈಗಾಗಲೇ ಜಿಲ್ಲಾಡಳಿತದಿಂದ ಅಂತಿಮನಮನಕ್ಕೆ ಬ್ಯಾರಿಕೇಡ್, ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.ಇನ್ನು ಊಳುವ ಅಥವಾ ಸುಡುವ ಪದ್ಧತಿಯಲ್ಲಿ ಅಂತ್ಯಕ್ರಿಯೆ ಮಾಡಬೇಕಾ ಎಂಬ ಗೊಂದಲ ಉಂಟಾಗಿದ್ದು,ಕುಟುಂಬಸ್ಥರು ಬೆಂಗಳೂರಿಂದ ಬಂದ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ.

ಹಿರಿಯ ನಟಿ, ಅಭಿನಯ ಸರಸ್ವತಿ ಬಿ.ಸರೋಜಾ ದೇವಿ ವಯೋಸಹಜ ಕಾಯಿಲೆಯಿಂದ ನಿನ್ನೆ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಿನ್ನೆ ಇಡೀ ದಿನ ಸರೋಜಾದೇವಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಮಿಳು ನಟ ಕಾರ್ತಿ ಮತ್ತು ವಿಶಾಲ್ ಸೇರಿದಂತೆ ಸಿನಿಮಾ ತಾರೆಯರು ಮತ್ತು ರಾಜಕೀಯ ನಾಯಕರು ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.