• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

ಪ್ರತಿಧ್ವನಿ by ಪ್ರತಿಧ್ವನಿ
April 5, 2023
in Top Story, ಇದೀಗ, ಕರ್ನಾಟಕ
0
ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಏ.೦5: ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಅದರ ಪ್ರಕಾರ ಆಡಳಿತ ಬಿಜೆಪಿ ಪಕ್ಷದ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಇನ್ನು ಒಟ್ಟಾರೆ 35% ಶಾಸಕರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಆಡಳಿತ ಪಕ್ಷದವರು ಇತರರಿಗೆ ಮಾದರಿ ಆಗಿ ನಡೆದುಕೊಳ್ಳಬೇಕು. ಆದರೆ ಆಡಳಿತ ಬಿಜೆಪಿ ಪಕ್ಷ ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್ ಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಸೈಲೆಂಟ್ ಸುನೀಲ್ ಹಾಗೂ ಫೈಟರ್ ರವಿ ಅವರ ಪಕ್ಷ ಸೇರ್ಪಡೆ ವಿಚಾರವಾಗಿ ಸಾಕಷ್ಟು ಸುದ್ದಿ ಆಗಿದೆ.

ಚುನಾವಣೆ ಹಿನ್ನಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಕ್ರಿಮಿನಲ್ ಗಳ ಪ್ರಕರಣ ತೆರವು ಮಾಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಆದೇಶದ ಮೇರೆಗೆ ಚುನಾವಣಾ ಆಯೋಗ ಕಠಿಣ ನಿಯಮ ಜಾರಿ ಮಾಡಿದೆ. ಚುನಾವಣೆ ಸಮಯದಲ್ಲಿ ನಾಮಪತ್ರ ಸಲ್ಲಿಕೆ ಮಾಡುವಾಗ ಕ್ರಿಮಿನಲ್ ಪ್ರಕರಣದ ಮಾಹಿತಿ ಕಲಾಂ ಅನ್ನು ಕಡ್ಡಾಯವಾಗಿ ತುಂಬಲೇಬೇಕು. ಈ ವಿಚಾರವಾಗಿ ಮಾಹಿತಿ ನೀಡದೇ ಇರುವುದು, ಮುಚ್ಚಿಡುವುದು ಮಾಡಿದರೆ ನಾಮಪತ್ರ ತಿರಸ್ಕರಿಸುವ ಅಧಿಕಾರ ನೀಡಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀಧರ್ ರೆಡ್ಡಿ ಎಂಬುವವರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಎಂದು ಹೇಳಿಕೊಂಡಿದ್ದು, ಇದಕ್ಕೆ ಇಂಬು ಕೊಡುವಂತೆ ಬಿಜೆಪಿ ನಾಯಕರು ಇವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇವರು ಬೆಂಗಳೂರು ನಗರ ಪದಾಧಿಕಾರಿಯಾಗಿ ಕೆಲಸ ಮಾಡಿದ್ದು, ದುರಂತ ಎಂದರೆ ಇವರ ವಿರುದ್ಧ 12 ಕ್ರಿಮಿನಲ್ ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. 1997ರಲ್ಲಿ ಜಮೀನು ಪ್ರಕರಣದಲ್ಲಿ ಅನೇಕ ಕೇಸು ದಾಖಲಾಗಿವೆ.

ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿ ಮಾಲಗೊಂಡನಹಳ್ಳಿ ಗ್ರಾಮದ ಸರ್ವೆ 76,79ರಲ್ಲಿ 9 ಎಕರೆಯಲ್ಲಿ 450ಕ್ಕೂ ಹೆಚ್ಚು ಕಂದಾಯ ನಿವೇಶನ ಸೃಷ್ಟಿ ಮಾಡಿ ಮಾರಾಟ ಮಾಡಿದ್ದಾರೆ. ಆನೇಕ ಕೆಳ ವರ್ಗದ ಜನರು ನಿವೇಶನ ಪಡೆದುಕೊಂಡಿದ್ದಾರೆ. ಜಯನಗರದ ಕ್ಲಾಸಿಕ್ ಸಂಸ್ಥೆಯ ಮೊಹಮದ್ ಇಲಿಯಾಸ್ ಎಂಬುವವರ ಮೂಲಕ ನಿವೇಶನ ಮಾರಾಟ ಮಾಡಿದ್ದಾರೆ. ಇಲಿಯಾಸ್ ಹಾಗೂ ಅವರ ತಮ್ಮ ಎಂ.ಬಿ ಬಾಬು ಹಾಗೂ ಶ್ರೀಧರ್ ರೆಡ್ಡಿ ಸೇರಿ ಮಾರಾಟವಾಗಿರುವ ಜಮೀನಿಗೆ ಮತ್ತೆ ದಾಖಲೆ ಸೃಷ್ಟಿ ಮಾಡಿ ಖಾಸಗಿ ಕಂಪನಿಗಳು ಹಾಗೂ ವ್ಯಕ್ತಿಗಳಿಗೆ ಮಾರಾಟ ಮಾಡಿ ಕೋಟ್ಯಂತರ ರುಪಾಯಿ ಅವ್ಯವಹಾರ ಮಾಡಿದ್ದಾರೆ. ಇವರ ವಿರುದ್ಧ ಅನೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ದಾಖಲಾಗಿರುವ ದೂರು ಪೂರ್ಣ ಪ್ರಮಾಣದಲ್ಲಿ ತನಿಖೆ ಆಗಿಲ್ಲ. ಹೀಗಾಗಿ ಕಾಂಗ್ರೆಸ್ ಪರವಾಗಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಈ ಹಗರಣ ಸಿಐಡಿ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿದ್ದೇವೆ. ಈ ಆರೋಪಕ್ಕೆ ಗ್ರುರಿಯಾಗಿರುವ ಶ್ರೀಧರ್ ರೆಡ್ಡಿ ಹಾಗೂ ಅವರ ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಿವೇಶನ ಖರೀದಿ ಮಾಡಿರುವವರಿಗೆ ತೊಂದರೆ ಆಗದಂತೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದೇವೆ.

ಈ ಆರೋಪಿ ಶ್ರೀಧರ್ ರೆಡ್ಡಿ ತಮ್ಮ ಸರ್ಕಾರದ ಹಸ್ತಕ್ಷೇಪ ಮೂಲಕ ಪ್ರಕರಣದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ನಿವೇಶನ ಖರೀದಿ ಮಾಡಿ ಮೋಸ ಹೋಗುವವರು ಅನೇಕ ದೂರು ನೀಡಿದ್ದರು ಬಿಜೆಪಿ ಸರ್ಕಾರ ಈತನ ರಕ್ಷಣೆ ಮಾಡುತ್ತಿದೆ. ಈ ಸಂಬಂಧವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತಿದ್ದೇವೆ. ಪತ್ರದ ಜತೆಗೆ 12 ಪ್ರಕರಣಗಳ ಆರೋಪ ಪಟ್ಟಿಯನ್ನು ನಾವು ಸಲ್ಲಿಕೆ ಮಾಡಲಿದ್ದೇವೆ. ಒಂದು ನಿವೇಶನ ಒಂದಕ್ಕೂ ಹೆಚ್ಚು ಬಾರಿ ಮಾರಾಟ ಮಾಡಿದರೆ ಅದು ಕ್ರಿಮಿನಲ್ ಪ್ರಕರಣ ಆಗಲಿದೆ. ಈತನ ವಿರುದ್ಧ ಸೆಕ್ಷನ್ 447, 427, 504, 506, 420 ಅಡಿಯಲ್ಲಿ ಪ್ರಕರಣ ದಾಖಲಾಗಿವೆ. ರೌಡಿ ಶೀಟರ್ ಗಳ ಪಕ್ಷ ಸೇರಿಸಿಕೊಳ್ಳುವ ಮುಂದುವರಿದ ಭಾಗವಾಗಿ ಇಂತಹ ಕೆಲಸ ಸರ್ಕಾರ ಹಾಗೂ ಬಿಜೆಪಿ ಮಾಡುತ್ತಿದೆ. ಬಿಟಿಎಂ ಕ್ಷೇತ್ರದಲ್ಲಿ ಇಂತಹ ಕ್ರಿಮಿನಲ್ ಪ್ರಕರಣ ಆರೋಪಿಗೆ ಯಾವ ಕಾರಣಕ್ಕೆ ಬೆಂಬಲ ನೀಡುತ್ತಿದೆ?

ಜನರ ಗಮನ ಬೇರೆಡೆ ಸೆಳೆಯಲು ದೇವೇಗೌಡರ ಹೇಳಿಕೆ

ಇನ್ನು ನಿನ್ನೆ ದೇವೇಗೌಡರು ದೆಹಲಿಯಲ್ಲಿ ಒಂದು ಹೇಳಿಕೆ ನೀಡಿ, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಸಂಬಂಧ ಚೆನ್ನಾಗಿದೆ. ವರುಣಾದಲ್ಲಿ ವಿಜಯೇಂದ್ರ ಅವರ ಸ್ಪರ್ಧೆಗೆ ಯಡಿಯೂರಪ್ಪ ಅವರು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಈ ಹೇಳಿಕೆ ನೀಡಿದ್ದಾರೆ. ನಾನು ದೇವೇಗೌಡರ ಮೇಲೆ ಅಪಾರ ಗೌರವ ಹೊಂದಿದ್ದು, ಅವರ ಬಾಯಲ್ಲಿ ಇಂತಹ ಹೇಳಿಕೆ ಬರಬಾರದು. ಅವರು ಹಾಸನ ಟಿಕೆಟ್ ವಿಚಾರವಾಗಿ ಇರುವ ಗೊಂದಲದ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಯಾವುದೇ ತಿರುಳು ಇಲ್ಲ. ರಾಜ್ಯ ಚುನಾವಣೆಯ ಪ್ರತಿ ಹಂತದಲ್ಲಿ ಜೆಡಿಎಸ್ ಬಿಜೆಪಿ ಬಿ ಟೀಮ್ ಆಗಿದೆ. ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ. ಹೊಂದಾಣಿಕೆ ಅಗತ್ಯ ಇರುವುದು ಜೆಡಿಎಸ್ ಪಕ್ಷಕ್ಕೆ. ಈ ಬಗ್ಗೆ ಸಿ.ಪಿ ಯೋಗೇಶ್ವರ್ ಅವರೇ ಹೇಳಿದ್ದಾರೆ.

Tags: AICCBJPBJP GovernmentcmbommaiCongress PartyDKShivakumarElectionHD DevegowdaHD KumaraswamyHDKJDSjdskarnatakaKarnataka BJPKarnataka PoliticskarnatakaelectionkarnatakanewsKPCCrahulgandhiRameshbabusiddaramihaSilent Sunila Joins BJPಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ

Next Post

ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ ಮತ್ತು ಅಭಿಷೇಕ್‌

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ  ಮತ್ತು ಅಭಿಷೇಕ್‌

ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ ಮತ್ತು ಅಭಿಷೇಕ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada