ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರವಸೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾಗಿದ್ದಾ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಗುರುವಾರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಸಾಲು ಸಾಲು ಭರವಸೆ ನೀಡಿದ್ದಾರೆ. ಹೌದು, ಪ್ರವೀಣ್ ಅವರ ಮನೆ ಶಿಥಿಲಾವಸ್ಥೆಯಲ್ಲಿದ್ದು, ಹೊಸದಾಗಿ ನಿರ್ಮಾಣದ ವ್ಯವಸ್ಥೆ ಮಾಡಲಾಗುವುದು ಮತ್ತು ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಭರವಸೆ ನೀಡಿದ್ದಾರೆ.

ಪ್ರವೀಣ್ ಹತ್ಯೆಗೈದ ಅಪರಾಧಿಗಳು ಇನ್ಯಾವತ್ತೂ ಹೊರಗಡೆ ಬರದಂತೆ ಮಾಡಿಸಬೇಕು. ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅನುಸರಿಸುವ ಎನ್ಕೌಂಟರ್ ಕ್ರಮವನ್ನು ಇಲ್ಲಿಯೂ ಜಾರಿಗೊಳಿಸಬೇಕು ಎಂದು ಪ್ರವೀಣ್ ಸಂಬಂಧಿಕರು ಬಿ.ವೈ.ವಿಜಯೇಂದ್ರ ಬಳಿ ಒತ್ತಾಯಿಸಿದ್ದಾರೆ.