ʼವೈದ್ಯರು ಭೂಮಿಯ ಮೇಲಿನ ದೇವಧೂತರುʼ ಧಿಡೀರ್‌ ಯೂಟರ್ನ್‌ ಹೊಡೆದ ಬಾಬಾ ರಾಮ್‌ ದೇವ್

ಕೆಲವು ದಿನಗಳ ಹಿಂದೆ  ಯೋಗ ಗುರು ಬಾಬ ರಾಮ್‌ದೇವ್‌ ಅಲೋಪತಿ ಚಿಕಿತ್ಸೆಯನ್ನು ಟೀಕಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದು  ವೈದ್ಯಕೀಯ ಸಂಘಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸರ್ಕಾರಕ್ಕೆ ಪತ್ರ ಬರೆದಿತ್ತು. ಇದೀಗ ಬಾಬಾ ರಾಮ್‌ ದೇವ್‌ ಧಿಡೀರ್‌ ಯೂ ಟರ್ನ್‌ ಹೊಡೆದು ಅಲೋಪತಿ ವೈದ್ಯರನ್ನು ʼಭೂಮಿಯ ಮೇಲಿನ ದೇವಧೂತರುʼ ಎಂದು ಬಣ್ಣಿಸಿದ್ದಾರೆ.

ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ನನಗೆ ಕೋವಿಡ್ ಲಸಿಕೆ ಅಗತ್ಯವಿಲ್ಲ ಎಂದ ರಾಮ್‌ ದೇವ್ ಶೀಘ್ರದಲ್ಲಿಯೇ ಕೋವಿಡ್‌ ಲಸಿಕೆ ಪಡೆಯುವುದಾಗಿ ಹೇಳಿದ್ದಾರೆ. ಜೊತೆಗೆ ಜೂನ್‌ 21 ರಿಂದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡಲಾಗುತ್ತದೆ ಎಂಬ ಪ್ರಧಾನಿ ಘೋಷಣೆಯನ್ನು ಸ್ವಾಗತಿಸಿದ ಅವರು ಇದೊಂದು ಐತಿಹಾಸಿಕ ಹೆಜ್ಜೆ ಎಂದಿದ್ದಾರೆ. ಪ್ರತಿಯೊಬ್ಬರು ಲಸಿಕೆ ಪಡೆಯುವಂತೆ  ಮನವಿ ಮಾಡಿದ್ದಾರೆ.

ತಪ್ಪದೆ ಎರಡೂ ಕೋವಿಡ್ ಲಸಿಕೆಯನ್ನು ಪಡೆಯಿರಿ ಹಾಗೆಯೇ ಯೋಗ ಮತ್ತು ಆಯುರ್ವೇದವನ್ನು ಪಾಲಿಸಿ, ನಿಮ್ಮನ್ನ ನೀವು ರಕ್ಷಿಸಿಕೊಳ್ಳಿ,  ಹೀಗೆ ಮಾಡುವುದರಿಂದ ಕೋವಿಡ್‌ನಿಂದ ಒಬ್ಬ ವ್ಯಕ್ತಿಯೂ ಸಾಯುವುದಿಲ್ಲ ಎಂದ ಅವರು ತುರ್ತು ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ  ಅಲೋಪತಿ ಚಿಕಿತ್ಸೆ ಉತ್ತಮವಾಗಿದೆ ಎಂದು ಹರಿದ್ವಾರದಲ್ಲಿ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದೇ ವೇಳೆ ತಮ್ಮ ವಿರುದ್ಧ ಭುಗಿಲೆದ್ದಿರುವ ವಿವಾದಗಳ ಕುರಿತು ಸ್ಪಷ್ಟನೆ ನೀಡಿದ ಅವರು ನಾನು ಯಾವುದೇ ಸಂಘಟನೆಯ ವಿರೋಧಿ ಅಲ್ಲ, ಉತ್ತಮ ವೈದ್ಯರು ನಮಗೆ ಸಿಕ್ಕ ವರ, ಅವರು ಭೂಮಿ ಮೇಲಿನ ದೇವಧೂತರೆಂದು ಹೊಗಳಿದ್ದಾರೆ. ಆದರೆ ನನ್ನ ಹೋರಾಟ ಔಷಧಿಗಳ ಹೆಸರಿನಲ್ಲಿ ಅಮಾಯಕ ಜನರನ್ನು ಶೋಷಣೆ ಮಾಡುತ್ತಿರುವ ವೈದ್ಯರ ವಿರುದ್ಧ ಎಂದು ಸ್ಪಷ್ಟ ಪಡಿಸಿದ್ದಾರೆ.

ಕೆಲವು ವೈದ್ಯರು ರೋಗಿಗಳಿಗೆ ದುಬಾರಿ ಔಷಧಿಗಳನ್ನು ಬರೆದುಕೊಟ್ಟು‌, ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಜನ ಆರ್ಥಿಕ ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಕಾರಣಕ್ಕಾಗಿ ಪ್ರಧಾನಿ ಮೋದಿಯವರು ಅಗ್ಗದ ಔಷಧಿಗಳು ದೊರೆಯುವ  ಜನೌಷಧ ಕೇಂದ್ರಗಳನ್ನು ಸ್ಥಾಪಿಸಬೇಕಾಯಿತು ಎಂದಿದ್ದಾರೆ.

Related posts

Latest posts

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ...

ಒಂದೇ ದಿನದಲ್ಲಿ ಎರಡು ವಿವಿಧ ಕೋವಿಡ್-19 ಲಸಿಕೆಗಳನ್ನು ಪಡೆದ ಬಿಹಾರದ ಮಹಿಳೆ

ಬಿಹಾರದ 63 ವರ್ಷದ ಮಹಿಳೆಗೆ ಒಂದೇ ದಿನದಲ್ಲಿ ಎರಡು ವಿಭಿನ್ನ ಕಂಪನಿಯ ಕರೋನ ಲಸಿಕೆ ನೀಡಲಾಗಿದೆ. ಅವರು ಈಗ ವೈದ್ಯರ ನಿಗದಲ್ಲಿದ್ದು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಬಿಹಾರದ ಮಹಿಳೆ ಸುನಿಲಾ ದೇವಿ ಎಂಬುವವರಿಗೆ ಜೂನ್ 16...

ಮಸೀದಿಗೆ ಜಾಗ ದಾನ ನೀಡಿದ ಸಿಖ್ ವ್ಯಕ್ತಿ: ಮಸೀದಿಯಲ್ಲಿ ಕಾರ್ಯಕ್ರಮ ಆಯೋಜಿಸಿದ ಗುರುದ್ವಾರ

ಕೋಮು‌‌ ಸಂಘರ್ಷಗಳು, ಪ್ರಚೋದನೆಗಳು ಮತ್ತು ವಿಭಿನ್ನ ಕೋಮಿನ ಜನರ ಮೇಲೆ ವಿನಾಕಾರಣ ಹಲ್ಲೆ, ಕೊಲೆ ನಡೆಯುವ ವಿದ್ಯಮಾನಗಳ ನಡುವೆ ಪಂಜಾಬಿನ‌ ಎರಡು ಜಿಲ್ಲೆಗಳು ಕೋಮುಸಾಮರಸ್ಯವನ್ನು ಉತ್ತೇಜಿಸುವಂತಹ ಘಟನೆಗೆ ಸಾಕ್ಷಿಯಾಗಿವೆ. ಸ್ವಾಭಿಮಾನಕ್ಕೆ, ಕೆಚ್ಚೆದೆಗೆ ಹಠಕ್ಕೆ...